ಹರಿದ್ವಾರ (ಉತ್ತರಾಖಂಡ್): ಕಾರ್ತಿಕ ಪೂರ್ಣಿಮೆಯ ಅಂಗವಾಗಿ ನವೆಂಬರ್ 30ರಂದು ಗಂಗಾ ನದಿಯಲ್ಲಿ ಪುಣ್ಯಸ್ನಾನಕ್ಕೆ ಸಾರ್ವಜನಿಕರಿಗೆ ಅವಕಾಶವಿಲ್ಲ ಎಂದು ಹರಿದ್ವಾರ ಜಿಲ್ಲಾಡಳಿತ ಆದೇಶ ನೀಡಿದೆ.
ಕೊರೊನಾ ಸೋಂಕಿನ ಮುಂಜಾಗ್ರತೆಯಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಭಕ್ತರು ಪುಣ್ಯ ಸ್ನಾನದಲ್ಲಿ ಭಾಗವಹಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.
ಕಾರ್ತಿಕ ಪೂರ್ಣಿಮೆಯ ಅಂಗವಾಗಿ ದೆಹಲಿ, ಹರಿಯಾಣ, ಪಂಜಾಬ್ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಗಂಗಾ ನದಿಯ ತೀರಕ್ಕೆ ಪ್ರತಿ ವರ್ಷ ಬರುತ್ತಾರೆ. ಆದರೆ ದೇವಾಲಯಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.