ವಿಶ್ವಸಂಸ್ಥೆ: ವಿಶ್ವ ಆರೋಗ್ಯ ಸಂಸ್ಥೆಗೆ ಅಮೆರಿಕ ನೀಡುತ್ತಿದ್ದ ಸಹಾಯಧನವನ್ನು ನಿಲ್ಲಿಸಲಾಗುವುದು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದರಿಂದ ವಿಶ್ವಸಂಸ್ಥೆ ಕಂಗಾಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ನೆರವಿಗೆ ಮುಂದಾಗುವಂತೆ ವಿಶ್ವಸಂಸ್ಥೆ ಮುಖ್ಯಸ್ಥ ಅಂಟೋನಿಯೊ ಗುಟೆರಸ್ ಜಾಗತಿಕ ಸಮುದಾಯಕ್ಕೆ ಮನವಿ ಮಾಡಿದ್ದಾರೆ.
ಸಹಾಯಧನ ನಿಲ್ಲಿಸುವಂತೆ ಟ್ರಂಪ್ ಬೆದರಿಕೆ; ಕಂಗಾಲಾದ ವಿಶ್ವ ಆರೋಗ್ಯ ಸಂಸ್ಥೆ - ಟ್ರಂಪ್ ಬೆದರಿಕೆ
ವಿಶ್ವ ಆರೋಗ್ಯ ಸಂಸ್ಥೆಯ ಚೀನಾ ಕೇಂದ್ರಿತ ನಿಲುವಿಗೆ ಆಕ್ಷೇಪ ವ್ಯಕ್ತಪಡಿಸಿದ್ದ ಅಧ್ಯಕ್ಷ ಟ್ರಂಪ್, ಅಮೆರಿಕದ ಸಹಾಯಧನ ನಿಲ್ಲಿಸುವುದಾಗಿ ಹೇಳಿದ್ದರು. ಹೀಗಾಗಿ ವಿಶ್ವ ಆರೋಗ್ಯ ಸಂಸ್ಥೆಯ ನೆರವಿಗೆ ಮುಂದಾಗುವಂತೆ ವಿಶ್ವಸಂಸ್ಥೆ ಮುಖ್ಯಸ್ಥ ಅಂಟೋನಿಯೊ ಗುಟೆರಸ್ ಜಾಗತಿಕ ಸಮುದಾಯಕ್ಕೆ ಮನವಿ ಮಾಡಿದ್ದಾರೆ.
"ಕೋವಿಡ್-19 ವಿರುದ್ಧ ಜಾಗತಿಕ ಹೋರಾಟಕ್ಕೆ ಗೆಲುವಾಗಲು ವಿಶ್ವ ಆರೋಗ್ಯ ಸಂಸ್ಥೆಯನ್ನು ಬಲಪಡಿಸುವುದು ಅಗತ್ಯವಿದೆ. ಹಿಂದೆಂದೂ ಕಾಣದಂಥ ವೈರಸ್ ದಾಳಿ ಮಾಡಿದೆ. ಒಂದು ವಿಷಯದ ಕುರಿತಾಗಿ ಹಲವರ ಅಭಿಪ್ರಾಯಗಳು ವಿಭಿನ್ನವಾಗಿರಬಹುದು." ಎಂದು ಟ್ರಂಪ್ ಹೆಸರು ಉಲ್ಲೇಖಿಸದೆ ಗುಟೆರಸ್ ಹೇಳಿದ್ದಾರೆ.
ಕೋವಿಡ್-19 ಕುರಿತಂತೆ ವಿಶ್ವ ಆರೋಗ್ಯ ಸಂಸ್ಥೆಯ ಚೀನಾ ಪರ ನಿಲುವಿಗೆ ಮಂಗಳವಾರ ಆಕ್ಷೇಪ ವ್ಯಕ್ತಪಡಿಸಿದ್ದ ಅಧ್ಯಕ್ಷ ಟ್ರಂಪ್, ಅಮೆರಿಕದ ಸಹಾಯಧನ ನಿಲ್ಲಿಸುವುದಾಗಿ ಹೇಳಿದ್ದರು. ಬುಧವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಟ್ರಂಪ್, ಕೋವಿಡ್-19 ಪರಿಸ್ಥಿತಿಯನ್ನು ವಿಶ್ವ ಆರೋಗ್ಯ ಸಂಸ್ಥೆ ಸರಿಯಾಗಿ ನಿಭಾಯಿಸುತ್ತಿಲ್ಲ. ಅದಕ್ಕೆ ನೀಡಲಾಗುತ್ತಿರುವ ಸಹಾಯಧನವನ್ನು ಮುಂದುವರಿಸಬೇಕೆ ಅಥವಾ ಬೇಡ ಎಂಬ ಬಗ್ಗೆ ಪರಿಶೀಲಿಸಿ ನಿರ್ಧರಿಸಲಾಗುವುದು ಎಂದು ಹೇಳಿದ್ದರು.