ಇತಾ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಇತಾದಲ್ಲಿ ಶುಕ್ರವಾರ ಸಂಜೆ ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆ ಕಾಮಗಾರಿ ವೇಳೆ ದುರ್ಘಟನೆ ಸಂಭವಿಸಿದ್ದು, ದುರ್ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ ಓವರ್ ಬ್ರಿಡ್ಜ್‌ನ ಸ್ಲ್ಯಾಬ್ ಎತ್ತುವಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಅವಶೇಷಗಳ ಕೆಳಗೆ ಒಂದು ಜೆಸಿಬಿ ಮತ್ತು ವಾಹನಗಳು ಸೇರಿದಂತೆ ಹಲವರು ಸಿಲುಕಿರುವುದಾಗಿ ಪ್ರತ್ಯಕ್ಷದರ್ಶಿ ಡಾ.ದೇವ್ ಆನಂದ್ ಎಂಬವರು ಈಟಿವಿ ಭಾರತ ಜೊತೆ ಮಾತನಾಡುತ್ತಾ ಶಂಕೆ ವ್ಯಕ್ತಪಡಿಸಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದರು. ದುರ್ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ
ಆದರೆ ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುವುದೆಂದು ಅಧಿಕಾರಿಗಳು ತಿಳಿಸಿದ್ದಾರೆ.