ವಾಷಿಂಗ್ಟನ್: ಕೊರೊನಾ ವೈರಸ್ ಹರಡುವಿಕೆ ಸಂಬಂಧ ಭಾರತದಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ ಕಿರುಕುಳ ಆಗುತ್ತಿರುವ ಬಗ್ಗೆ ವರದಿಗಳಾಗಿವೆ. ಸಾಮಾಜಿಕ ಜಾಲಾತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ತಪ್ಪು ಮಾಹಿತಿ ಹರಡಲಾಗುತ್ತಿದೆ. ಇದು ದುರದೃಷ್ಟಕರ ಎಂದು ಅಮೆರಿಕ ಬೇಸರ ವ್ಯಕ್ತಪಡಿಸಿದೆ.
ಕೊರೊನಾ ಸಂಬಂಧ ಭಾರತದಲ್ಲಿ ಅಲ್ಪಸಂಖ್ಯಾತರಿಗೆ ಕಿರುಕುಳ ಆಗುತ್ತಿರುವುದು ದುರದೃಷ್ಟಕರ: ಅಮೆರಿಕ - ಸ್ಯಾಮ್ ಬ್ರೌನ್‌ಬ್ಯಾಕ್
ಕೋವಿಡ್-19 ಹರಡುವಿಕೆ ಸಂಬಂಧ ಭಾರತದಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ ಕಿರುಕುಳ ಆಗುತ್ತಿರುವ ಬಗ್ಗೆ ವರದಿಗಳಾಗಿವೆ. ಇದು ದುರದೃಷ್ಟಕರ ಎಂದು ಅಮೆರಿಕದ ಅಧಿಕಾರಿಗಳು ಹೇಳಿದ್ದಾರೆ.

ಜಗತ್ತಿನಾದ್ಯಂತ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ಕೋವಿಡ್-19 ಪರಿಣಾಮಗಳ ಕುರಿತು ನಿನ್ನೆ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ರಾಯಭಾರಿ ಸ್ಯಾಮ್ ಬ್ರೌನ್‌ಬ್ಯಾಕ್ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಕೋವಿಡ್-19 ಬಗ್ಗೆ ಭಾರತದ ಹಿರಿಯ ಅಧಿಕಾರಿಯೊಬ್ಬರು ಒಗ್ಗಟ್ಟಿನ ಹೇಳಿಕೆ ನೀಡಿದ್ದಾರೆ. ಇದನ್ನು ತಾವು ಬೆಂಬಲಿಸುವುದಾಗಿ ಸ್ಯಾಮ್ ತಿಳಿಸಿದ್ದಾರೆ.
ಕೋವಿಡ್-19 ಯಾವುದೇ ಧರ್ಮ, ಭಾಷೆ ಅಥವಾ ಗಡಿಯ ಆಧಾರದ ಮೇಲೆ ಹರಡುವುದಿಲ್ಲ ಎಂಬ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದರು. ಇದು ಸತ್ಯವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಡಿರುವ ಸುಳ್ಳು ಸುದ್ದಿಗಳನ್ನು ಸರ್ಕಾರ ತಳ್ಳಿಹಾಕಿದೆ ಎಂದು ಹೇಳಿದ್ದಾರೆ.