ಲಕ್ನೋ (ಉತ್ತರ ಪ್ರದೇಶ): ಲಾಕ್ಡೌನ್ನಿಂದಾಗಿ ಬೇರೆ ರಾಜ್ಯಗಳಲ್ಲಿ ಸಿಲುಕಿಕೊಂಡಿರುವ ವಲಸಿಗರ ಬಳಿ ಬಸ್ ಮತ್ತು ರೈಲಿನ ಪ್ರಯಾಣ ದರವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪಡೆಯುತ್ತಿರುವುದು ನಿಜಕ್ಕೂ ಬೇಸರ ಹಾಗೂ ದುರದೃಷ್ಟಕರ ಸಂಗತಿ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.
ರೈಲು ಮತ್ತು ಬಸ್ಸಿನ ಮೂಲಕ ವಲಸೆ ಕಾರ್ಮಿಕರನ್ನು ಅವರ ಮನೆಗಳಿಗೆ ಕಳುಹಿಸುವ ವೇಳೆ ಬಡ ಕಾರ್ಮಿಕರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಣ ವಸೂಲಿ ಮಾಡುತ್ತಿರುವುದು ದುರದೃಷ್ಟಕರ ಎಂದು ಮಾಯಾವತಿ ಟ್ವೀಟ್ ಮಾಡುವ ಮೂಲಕ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.