ನವದೆಹಲಿ: ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಕೇಂದ್ರ ಸಚಿವ ಸಂಪುಟ ಸಂತಾಪ ಸೂಚಿಸಿದೆ.
ಸುರೇಶ್ ಅಂಗಡಿ ನಿಧನಕ್ಕೆ ಕೇಂದ್ರ ಸಚಿವ ಸಂಪುಟ ಸಂತಾಪ - ಸುರೇಶ್ ಅಂಗಡಿ ನಿಧನಕ್ಕೆ ಕೇಂದ್ರ ಸಚಿವ ಸಂಪುಟ ಸಂತಾಪ
ನಿನ್ನೆ ಕೊರೊನಾಗೆ ಬಲಿಯಾದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಇಂದು ಕೇಂದ್ರ ಸಚಿವ ಸಂಪುಟ ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಿ ಸಂತಾಪ ಸೂಚಿಸಿದೆ.
![ಸುರೇಶ್ ಅಂಗಡಿ ನಿಧನಕ್ಕೆ ಕೇಂದ್ರ ಸಚಿವ ಸಂಪುಟ ಸಂತಾಪ Suresh Angadi](https://etvbharatimages.akamaized.net/etvbharat/prod-images/768-512-8918718-thumbnail-3x2-megha.jpg)
ಸುರೇಶ್ ಅಂಗಡಿ
ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಿ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನಕ್ಕೆ ಸಂಪುಟ ಕಂಬನಿ ಮಿಡಿದಿದ್ದು, ಅವರನ್ನು ಸ್ಮರಿಸಿದೆ.
ಮಾರಣಾಂತಿಕ ಕೋವಿಡ್ ಸೋಂಕಿಗೆ ಒಳಗಾಗಿದ್ದ ಸುರೇಶ್ ಅಂಗಡಿ (65), ನಿನ್ನೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಅಂಗಡಿ ಅವರು ಸಂಸದ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.