ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಸಂಜೆ 7 ಗಂಟೆಗೆ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ, ಲ್ಯಾಂಡ್ ಬ್ಯಾಂಕ್ ನೀತಿಗೆ ಒಪ್ಪಿಗೆ? - ಪ್ರಧಾನಿ ನರೇಂದ್ರ ಮೋದಿ
ದೇಶದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಭೂಮಿ ಒದಗಿಸಲು ಅನುವು ಮಾಡಿಕೊಡುವುದಕ್ಕೆ ಲ್ಯಾಂಡ್ ಬ್ಯಾಂಕ್ ಸ್ಥಾಪನೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.
ಜೂನ್ 24 ರಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ದೇಶದ ಆರ್ಥಿಕ ಉತ್ತೇಜನೆಯ ಸಂಬಂಧ ಸುಮಾರು 15,000 ಕೋಟಿ ರೂ ಮೊತ್ತದ ಪಶುಸಂಗೋಪನೆ ಮೂಲಸೌಕರ್ಯ ಅಭಿವೃದ್ಧಿ ನಿಧಿ ಸ್ಥಾಪಿಸಲು ಅನುಮೋದನೆ ನೀಡಲಾಗಿತ್ತು. ಇದರ ಜೊತೆಗೆ ಹಿಂದುಳಿದ ವರ್ಗಗಳೊಳಗಿನ ಉಪ-ವರ್ಗೀಕರಣದ ಸಮಸ್ಯೆಯನ್ನು ಪರೀಕ್ಷಿಸಲು ಸಂವಿಧಾನದ 340 ನೇ ಪರಿಚ್ಛೇದದ ಅಡಿಯಲ್ಲಿ ರಚಿಸಲಾದ ಆಯೋಗದ ಅಧಿಕಾರಾವಧಿಯನ್ನು ವಿಸ್ತರಿಸಲು ಒಪ್ಪಿಗೆ ನೀಡಲಾಗಿತ್ತು.
ಕ್ಯಾಬಿನೆಟ್ ಸಭೆಯ ನಂತರ ಮಾತನಾಡಿದ್ದ ಪರಮಾಣು ಇಂಧನ ಮತ್ತು ಬಾಹ್ಯಾಕಾಶ ವ್ಯವಹಾರಗಳ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ, ಪ್ರಚಾರ ಮತ್ತು ಅಧಿಕಾರ ಕೇಂದ್ರವನ್ನು ರಚಿಸಲಾಗಿದ್ದು, ಇದು ಖಾಸಗಿ ಕೈಗಾರಿಕೆಗಳಿಗೆ ಬಾಹ್ಯಾಕಾಶ ಚಟುವಟಿಕೆ ನಡೆಸುವುದಕ್ಕೆ ಅವಕಾಶ ನೀಡಲಿದೆ ಎಂದು ತಿಳಿಸಿದ್ದರು.