ನವದೆಹಲಿ:ಇಂದು ಕೇಂದ್ರ ಸಚಿವ ಸಂಪುಟ ಸಭೆ ಸೇರಲಿದ್ದು, ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ. 7 ಲೋಕ ಕಲ್ಯಾಣ್ ಮಾರ್ಗ್ನಲ್ಲಿರುವ ಪ್ರಧಾನಿ ನಿವಾಸದಲ್ಲಿ ಕೇಂದ್ರ ಸಚಿವ ಸಂಪುಟದ ಸಭೆ ನಡೆಯಲಿದೆ.
ಕಳೆದ ಜುಲೈ 8 ರಂದು ಕೇಂದ್ರ ಸಚಿವ ಸಂಪುಟದ ಸಭೆ ನಡೆದಿತ್ತು. ಈ ಸಂಪುಟ ಸಭೆಯಲ್ಲಿ ಉದ್ಯೋಗದಾತ ಮತ್ತು ನೌಕರರ ಪಿಎಫ್ ಪಾವತಿಸುವ ಯೋಜನೆಯನ್ನು ಆಗಸ್ಟ್ವರೆಗೆ, ಅಂದರೆ ಮೂರು ತಿಂಗಳವರೆಗೆ ವಿಸ್ತರಿಸುವ ಪ್ರಸ್ತಾವನೆಯನ್ನು ಅಂಗೀಕರಿಸಿತ್ತು.