ನವದೆಹಲಿ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಂಟಿಯಾಗಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು.
ಬಿಎಸ್ವೈ- ಶಾ ವೈಮಾನಿಕ ಸಮೀಕ್ಷೆ: ಅಧಿಕಾರಿಗಳೊಂದಿಗೆ ವಿಮಾನದಲ್ಲೇ ಚರ್ಚೆ
ಮಧ್ಯಾಹ್ನ ಸುಮಾರು 2.40ರ ವೇಳೆಗೆ ಗೃಹ ಸಚಿವ ಅಮಿತ್ ಶಾ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದು, ನಂತರ ವಾಯುಪಡೆಯ ಹೆಲಿಕಾಪ್ಟರ್ನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ವಿಮಾನದಲ್ಲಿ ಸಿಎಂ ಯಡಿಯೂರಪ್ಪ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.
ಬಿಎಸ್ವೈ- ಶಾ ವೈಮಾನಿಕ ಸಮೀಕ್ಷೆ
ಮಧ್ಯಾಹ್ನ ಸುಮಾರು 2.40ರ ವೇಳೆಗೆ ಶಾ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದು, ನಂತರ ವಾಯುಪಡೆಯ ಹೆಲಿಕಾಪ್ಟರ್ನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ವಿಮಾನದಲ್ಲಿ ಸಿಎಂ ಯಡಿಯೂರಪ್ಪ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.
ರಾಜ್ಯ 17 ಜಿಲ್ಲೆಗಳ 80 ತಾಲೂಕುಗಳಲ್ಲಿ ಅತಿವೃಷ್ಟಿಯಿಂದ ಜನ ಸಂಕಷ್ಟಕ್ಕೆ ಸಿಲುಕಿ ಜನ-ಜಾನುವಾರು ಸೇರಿ ಅಪಾರ ಪ್ರಮಾಣದಲ್ಲಿ ಆಸ್ತಿ- ಪಾಸ್ತಿ ನಷ್ಟ ಉಂಟಾಗಿದೆ. ಇದನ್ನು ಕೇಂದ್ರ ಗಂಭೀರವಾಗಿ ಪರಿಗಣಿಸಬೇಕೆಂದು ರಾಜ್ಯ ಮನವಿ ಮಾಡಿದೆ.