ಮೀರತ್(ಉತ್ತರ ಪ್ರದೇಶ):ಪಶ್ಚಿಮ ಉತ್ತರ ಪ್ರದೇಶದ ವಿದ್ಯಾರ್ಥಿಗಳಿಗೆ 10ರಷ್ಟು ಮಿಸಲಾತಿ ನೀಡಿದರೆ ಪ್ರತಿಭಟನೆ ನಡೆಸುತ್ತಿರುವ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ಜೆಎನ್ಯು ವಿದ್ಯಾರ್ಥಿಗಳ ಜೊತೆ ವ್ಯವಹರಿಸಲು ಸಹಕಾರಿಯಾಗುತ್ತದೆ ಎಂದು ಕೇಂದ್ರ ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆ ಸಚಿವ ಸಂಜೀವ್ ಬಲ್ಯಾನ್ ಹೇಳಿಕೆ ನೀಡಿದ್ದಾರೆ.
'ಯುಪಿ ವಿದ್ಯಾರ್ಥಿಗಳಿಗೆ 10ರಷ್ಟು ಮೀಸಲಾತಿ ಕೊಡಿ, ಜೆಎನ್ಯು, ಜಾಮಿಯಾ ವಿವಿಗಳು ಸರಿಯಾಗುತ್ತವೆ' - ಉತ್ತರ ಪ್ರದೇಶದ ವಿದ್ಯಾರ್ಥಿಗಳಿಗೆ 10 ರಷ್ಟು ಮಿಸಲಾತಿ
ಜೆಎನ್ಯು ಮತ್ತು ಜಾಮಿಯಾ ಮಿಲಿಯಾ ವಿವಿಗಳಲ್ಲಿ ಉತ್ತರ ಪ್ರದೇಶದ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡಿದರೆ ದೇಶದ ವಿರುದ್ಧ ಘೋಷಣೆ ಕೂಗುವ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲು ಸಹಕಾರಿಯಾಗಲಿದೆ ಎಂದು ಕೇಂದ್ರ ಸಚಿವ ಸಂಜೀವ್ ಬಲ್ಯಾನ್ ಹೇಳಿಕೆ ನೀಡಿದ್ದಾರೆ.
ಕೇಂದ್ರ ಸಚಿವ ಸಂಜೀವ್ ಬಲ್ಯಾನ್
ಕೇಂದ್ರ ಸಚಿವ ಸಂಜೀವ್ ಬಲ್ಯಾನ್
ಸರ್ವಜನಿಕ ಸಭೆಯನ್ನ ಉದ್ದೇಶಿಸಿ ಮಾತನಾಡಿದ ಅವರು, ನವದೆಹಲಿಯಲ್ಲಿನ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಪಶ್ಚಿಮ ಉತ್ತರ ಪ್ರದೇಶದ ವಿದ್ಯಾರ್ಥಿಗಳಿಗೆ ಶೇ. 10ರಷ್ಟು ಮೀಸಲಾತಿ ನೀಡುವಂತೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರನ್ನ ಆಗ್ರಹಿಸಿದ್ದಾರೆ.
ಜಾಮಿಯಾ ಮಿಲಿಯಾ ಮತ್ತು ಜೆಎನ್ಯುನಲ್ಲಿ ಉತ್ತರ ಪ್ರದೇಶದ ವಿದ್ಯಾರ್ಥಿಗಳಿಗೆ 10ರಷ್ಟು ಮೀಸಲಾತಿ ನೀಡಬೇಕು ಎಂದು ನಾನು ರಾಜನಾಥ್ ಸಿಂಗ್ ಅವರನ್ನ ಒತ್ತಾಯಿಸುತ್ತೇನೆ. ದೇಶದ ವಿರುದ್ಧ ಘೋಷಣೆ ಕೂಗುವ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲು ಈ ಮೀಸಲಾತಿ ಸಹಕಾರಿಯಾಗಲಿದೆ ಎಂದಿದ್ದಾರೆ.