ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಸಚಿವ ಸಂಪುಟ ಸಭೆ ನಡೆಸಲಾಯಿತು. ಈ ವೇಳೆ, ಸಂಸದರ ಪ್ರತಿ ತಿಂಗಳ ಸಂಬಳದಲ್ಲಿ ಶೇ.30ರಷ್ಟು ಕಡಿತ ಸೇರಿದಂತೆ ಅನೇಕ ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು.
ಏಪ್ರಿಲ್ 14ಕ್ಕೆ ಲಾಕ್ಡೌನ್ ಮುಕ್ತಾಯ? ಕುತೂಹಲಕಾರಿ ಉತ್ತರ ನೀಡಿದ ಜಾವ್ಡೇಕರ್! - ಲಾಕ್ಡೌನ್ ಓಪನ್
ದೇಶದಲ್ಲಿ ಏಪ್ರಿಲ್ 14ಕ್ಕೆ ಲಾಕ್ಡೌನ್ ಓಪನ್ ಆಗಲಿದೆ ಎಂಬ ಮಾತು ಕೆಲವರ ಬಾಯಿಂದ ಕೇಳಿ ಬರುತ್ತಿದ್ದು, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಮಾತನಾಡಿದ್ದಾರೆ.
ಸಚಿವ ಸಂಪುಟ ನಡೆದ ಬಳಿಕ ಮಾತನಾಡಿದ ಕೇಂಧ್ರ ಸಚಿವ ಪ್ರಕಾಶ್ ಜಾವ್ಡೇಕರ್, ಏಪ್ರಿಲ್ 14ರ ಬಳಿಕ ದೇಶದಲ್ಲಿ ಹೇರಲಾಗಿರುವ ಲಾಕ್ಡೌನ್ ಮುಕ್ತಾಯಗೊಳ್ಳಲಿದೆ ಎಂಬ ಪ್ರಶ್ನೆಗೆ ಕುತೂಹಲಕಾರಿ ಉತ್ತರ ನೀಡಿದ್ದಾರೆ. ದೇಶದ ಹಿತದೃಷ್ಟಿಯಿಂದ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿರುವ ಅವರು ಸರಿಯಾದ ಸಮಯದಲ್ಲಿ ಲಾಕ್ಡೌನ್ ಮುಕ್ತಾಯದ ಬಗ್ಗೆ ಘೋಷಣೆ ಮಾಡಲಾಗುವುದು ಎಂದಿದ್ದಾರೆ.
ದೇಶದ ಸ್ಥಿತಿಗತಿ ಕುರಿತು ಪ್ರತಿದಿನ ಮಾಹಿತಿ ಪಡೆದುಕೊಳ್ಳಲಾಗುತ್ತಿದ್ದು, ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರ ಹೊರಹಾಕುತ್ತೇವೆ ಎಂದಿದ್ದಾರೆ. ಆದರೆ ಉತ್ತರಪ್ರದೇಶದ ಅಧಿಕಾರಿಯೊಬ್ಬರು ದೇಶದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಲಾಕ್ಡೌನ್ ಓಪನ್ ಆಗಲು ಜನರು ಹೆಚ್ಚು ಸಮಯ ಕಾಯಬೇಕು ಎಂದಿದ್ದಾರೆ. ಇನ್ನು ಏಪ್ರಿಲ್ 14ರ ಬಳಿಕ ಉತ್ತರಪ್ರದೇಶದಲ್ಲಿ ಹಂತಹಂತವಾಗಿ ಲಾಕ್ಡೌನ್ ಓಪನ್ ಮಾಡಲಾಗುವುದು ಎಂದು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.