ನವದೆಹಲಿ:ದೇಶಾದ್ಯಂತ ಇಂದಿನಿಂದ ಅನ್ಲಾಕ್ 4.0 ಜಾರಿಗೊಂಡಿದ್ದು, ದೇಶದ ಜನರಿಗೆ ಮತ್ತಷ್ಟು ಸಡಿಲಿಕೆ ನೀಡಿ ಕೇಂದ್ರ ಗೃಹ ಸಚಿವಾಲಯ ಈಗಾಗಲೇ ಆದೇಶ ಹೊರಡಿಸಿದೆ. ಇದೀಗ ಭಾರತೀಯ ರೈಲ್ವೆ ಇಲಾಖೆ ಕೂಡ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತಷ್ಟು ರೈಲುಗಳ ಸಂಚಾರಕ್ಕೆ ಯೋಜನೆ ರೂಪಿಸಿದೆ.
ಸದ್ಯ ಲಭ್ಯವಾಗಿರುವ ಮಾಹಿತಿ ಪ್ರಕಾರ, ದೇಶದಲ್ಲಿ ಹೆಚ್ಚುವರಿಯಾಗಿ 100 ರೈಲುಗಳ ಸಂಚಾರಕ್ಕೆ ರೈಲ್ವೆ ಇಲಾಖೆ ಮುಂದಾಗಿದ್ದು, ಕೇಂದ್ರ ಗೃಹ ಸಚಿವಾಲಯದ ಬಳಿ ಅನುಮತಿ ಕೇಳಿದೆ ಎಂದು ವರದಿಯಾಗಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ರೈಲ್ವೆ ಇಲಾಖೆ ಎಲ್ಲಾ ರಾಜ್ಯಗಳೊಂದಿಗೆ ಮಾತುಕತೆ ನಡೆಸಿ, ಮಾಹಿತಿ ಕಲೆಹಾಕಿದೆ ಎಂದು ತಿಳಿದು ಬಂದಿದೆ. ದೇಶದಲ್ಲಿ ಕೆಲವೇ ದಿನಗಳಲ್ಲಿ ಕೆಲವೊಂದು ಮಾರ್ಗಸೂಚಿಗಳೊಂದಿಗೆ ಮತ್ತಷ್ಟು ರೈಲುಗಳ ಓಡಾಟ ನಡೆಸುವುದು ಖಚಿತ ಎಂದು ಹೇಳಲಾಗುತ್ತಿದೆ.