ಕರ್ನಾಟಕ

karnataka

ETV Bharat / bharat

ಕಾಶ್ಮೀರ ವಿವಾದ ಅಂತಾರಾಷ್ಟ್ರೀಕರಣಗೊಳಿಸುವ ಪಾಕಿಸ್ತಾನದ ಪ್ರಯತ್ನ ಮತ್ತೊಮ್ಮೆ ವಿಫಲ - ವಿಶ್ವ ಸಂಸ್ಥೆಯ ಭದ್ರತಾ ಮಂಡಳಿ ಸಭೆ

ಪಾಕಿಸ್ತಾನದ ಆಪ್ತ ರಾಷ್ಟ್ರ ಚೀನಾ ಜಮ್ಮು ಕಾಶ್ಮೀರ ವಿಚಾರದ ಬಗ್ಗೆ ಚರ್ಚಿಸಲು ವಿಶ್ವ ಸಂಸ್ಥೆಯ ಭದ್ರತಾ ಮಂಡಳಿ ಸಭೆ ಕರೆದಿತ್ತು. ಈ ಸಭೆಯಲ್ಲಿ ಯಾವುದೇ ಮಹತ್ವದ ವಿಚಾರಗಳು ಚರ್ಚೆಯಾಗದ ಹಿನ್ನೆಲೆ. ವಿವಾದವನ್ನು ಅಂತಾರಾಷ್ಟ್ರೀಕರಣಗೊಳಿಸುವ ಪಾಕಿಸ್ತಾನದ ಹುನ್ನಾರ ವಿಫಲವಾಗಿದೆ.

UN Security Council meeting
ಪಾಕಿಸ್ತಾನದ ಹುನ್ನಾರ ಮತ್ತೊಮ್ಮೆ ವಿಫಲ

By

Published : Aug 6, 2020, 4:20 PM IST

ನವದೆಹಲಿ: ಕಾಶ್ಮೀರ ಸಮಸ್ಯೆಯನ್ನು ವಿಶ್ವಸಂಸ್ಥೆಯ ಮೂಲಕ ಅಂತಾರಾಷ್ಟ್ರೀಕರಿಸುವ ಪಾಕಿಸ್ತಾನದ ಪ್ರಯತ್ನವು ಮತ್ತೆ ವಿಫಲವಾಗಿದೆ ಎಂದು ಭಾರತದ ಉನ್ನತ ರಾಜತಾಂತ್ರಿಕರು ತಿಳಿಸಿದ್ದಾರೆ. ಕಾಶ್ಮೀರ ವಿಷಯ ಚರ್ಚಿಸಲು ಚೀನಾ ನೇತೃತ್ವದಲ್ಲಿ ನಡೆದ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿ ಸಭೆಯ ಬಳಿಕ ಈ ಹೇಳಿಕೆ ಹೊರ ಬಂದಿದೆ.

ಜಮ್ಮು ಕಾಶ್ಮೀರ ವಿವಾದ ಭಾರತ ಮತ್ತು ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ವಿಷಯವಾಗಿದೆ ಎಂದು ಭದ್ರತಾ ಮಂಡಳಿಯ ಬಹುತೇಕ ಖಾಯಂ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ. ಶಿಮ್ಲಾ ಒಪ್ಪಂದದ ಮಹತ್ವವನ್ನು ಅವರು ಒತ್ತಿ ಹೇಳಿದ್ದಾರೆ ಎಂದು ಭಾರತದ ಯುಎನ್ ರಾಯಭಾರಿ ಟಿ.ಎಸ್ ತಿರುಮೂರ್ತಿ ಹೇಳಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿದ ಅವರು, "ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನ ಮತ್ತೊಮ್ಮೆ ವಿಫಲವಾಗಿದೆ. ಈ ಕುರಿತು ಚರ್ಚಿಸಲು ಕರೆದಿದ್ದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಯಾವುದೇ ಮಹತ್ವದ ಚರ್ಚೆಗಳಾಗಿಲ್ಲ. ಬಹುತೇಕ ಎಲ್ಲಾ ಸದಸ್ಯ ರಾಷ್ಟ್ರಗಳು ಕಾಶ್ಮೀರ ವಿಚಾರ ಪಾಕಿಸ್ತಾನ ಮತ್ತು ಭಾರತದ ನಡುವಿನ ದ್ವಿಪಕ್ಷೀಯ ವಿಚಾರ ಎಂದು ಅಭಿಪ್ರಾಯಪಟ್ಟಿದೆ. ಈ ಕುರಿತು ಭದ್ರತಾ ಮಂಡಳಿಯಲ್ಲಿ ಚರ್ಚಿಸುವುದು ಸೂಕ್ತವಲ್ಲ ಎಂದು ಅವರು ಹೇಳಿದ್ದಾರೆ" ಎಂದು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿ, ಜಮ್ಮು ಕಾಶ್ಮೀರ ಮತ್ತು ಲಡಾಖ್​ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿ ಒಂದು ವರ್ಷವಾದ ಬಳಿಕ, ಬುಧವಾರ ಪಾಕಿಸ್ತಾನದ ಆಪ್ತ ರಾಷ್ಟ್ರ ಚೀನಾ ಜಮ್ಮು ಕಾಶ್ಮೀರ ವಿಚಾರದ ಬಗ್ಗೆ ಚರ್ಚಿಸಲು ವಿಶ್ವ ಸಂಸ್ಥೆಯ ಭದ್ರತಾ ಮಂಡಳಿ ಸಭೆ ಕರೆದಿತ್ತು. ಈ ಸಭೆಯಲ್ಲಿ ಯಾವುದೇ ಮಹತ್ವದ ವಿಚಾರಗಳು ಚರ್ಚೆಯಾಗದ ಹಿನ್ನೆಲೆ. ವಿವಾದವನ್ನು ಅಂತಾರಾಷ್ಟ್ರೀಕರಣಗೊಳಿಸುವ ಪಾಕಿಸ್ತಾನದ ಹುನ್ನಾರ ವಿಫಲವಾಗಿದೆ.

ಕಾಶ್ಮೀರ ವಿವಾದ ದ್ವಿಪಕ್ಷೀಯ ವಿಚಾರ ಎಂದು ಹೇಳಿದ್ದರಲ್ಲಿ ಅಮೆರಿಕಾ ಮುಂಚೂಣಿಯಲ್ಲಿತ್ತು. ಇತರ ಸದಸ್ಯ ರಾಷ್ಟ್ರಗಳು ಕೂಡ ಅದಕ್ಕೆ ಕೈ ಜೋಡಿಸಿದೆ. ವಾಸ್ತವವನ್ನು ಒಪ್ಪಿಕೊಳ್ಳಿ ಮತ್ತು ಭಾರತ ವಿರೋಧಿ ಪ್ರಚಾರವನ್ನು ನಿಲ್ಲಿಸುವಂತೆ ಪಾಕಿಸ್ತಾನಕ್ಕೆ ಅದು ಸಲಹೆ ನೀಡಿದೆ ಎಂದು ತಿರುಮೂರ್ತಿ ಸ್ಪಷ್ಟಪಡಿಸಿದ್ದಾರೆ.

ABOUT THE AUTHOR

...view details