ಬಲ್ಲಿಯಾ, (ಉತ್ತರ ಪ್ರದೇಶ):14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಅಶ್ಲೀಲ ದೃಶ್ಯಗಳನ್ನು ಚಿತ್ರೀಕರಿಸಿ, ಬಲವಂತದ ಮತಾಂತರ ಮಾಡಿಕೊಳ್ಳಲು ಮದುವೆಗೆ ಒತ್ತಾಯಿಸುತ್ತಿದ್ದ ಆರೋಪದ ಮೇಲೆ 22 ವರ್ಷದ ಯುವಕ ಮತ್ತು ಆತನ ತಂದೆಯನ್ನು ಬಂಧಿಸಲಾಗಿದೆ.
ಉತ್ತರ ಪ್ರದೇಶ ಬಲ್ಲಿಯಾ ಎಂಬಲ್ಲಿ ಘಟನೆ ನಡೆದಿದ್ದು, ಮತಾಂತರ ನಿಷೇಧ ಕಾಯ್ದೆ ಮತ್ತು ಪೋಕ್ಸೋ ಕಾಯ್ದೆಯಡಿಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜನವರಿ 11ರಂದು ಓರ್ವ ಯುವಕ 14 ವರ್ಷದ ಬಾಲಕಿಯ ಮನೆಗೆ ನುಗ್ಗಿ, ಆಕೆಯ ಮೇಲೆ ಅತ್ಯಾಚಾರವೆಸಗಿದ್ದ. ಅತ್ಯಾಚಾರದ ದೃಶ್ಯವನ್ನು ಸೆರೆ ಹಿಡಿದು ಮದುವೆಯಾಗಿ ಮತಾಂತರವಾಗಲು ಒತ್ತಾಯಿಸುತ್ತಿದ್ದನಂತೆ. ಜನವರಿ 13ರಂದು ಬಾಲಕಿ ಈ ವಿಚಾರವನ್ನು ತನ್ನ ಪೋಷಕರಿಗೆ ತಿಳಿಸಿದ್ದಾಳೆ.