ಝಾನ್ಸಿ (ಉತ್ತರ ಪ್ರದೇಶ):ಒಂದೇಕುಟುಂಬದ 23 ಸದಸ್ಯರ ಮೇಲೆ ನೆರೆಮನೆಯವರು ಆ್ಯಸಿಡ್ ದಾಳಿ ನಡೆಸಿರುವ ಘಟನೆ ಬಸಾರ್ ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಇತರರಿಗೆ ಸಣ್ಣಪುಟ್ಟ ಸುಟ್ಟು ಗಾಯಗಳಾಗಿವೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕುಡಿಯುವ ನೀರಿನ ವಿಚಾರದಲ್ಲಿ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿದೆ. ಈ ವೇಳೆ ಅಕ್ಕಸಾಲಿಗ ಕುಟುಂಬದವರು ತಮ್ಮ ಮನೆಯ ಟೆರೇಸ್ ಮೇಲಿನಿಂದ 23 ಜನರ ಮೇಲೆ ಆ್ಯಸಿಡ್ ಎರಚಿದ್ದಾರೆ. ಇನ್ನು ಘಟನೆ ಸಂಭವಿಸುತ್ತಿದ್ದಂತೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
"ಸದ್ಯ ದೂರು ದಾಖಲಾಗಿದ್ದು, ಪರಾರಿಯಾಗಿರುವವರನ್ನು ಪೊಲೀಸರು ಹುಡುಕುತ್ತಿದ್ದಾರೆ. ದೂರಿನಲ್ಲಿ 6 ಜನರ ಮೇಲೆ ಕೇಸ್ ದಾಖಲಾಗಿದೆ. ಅದರಲ್ಲಿ ನಾಲ್ವರನ್ನು ಬಂಧಿಸಲಾಗಿದೆ" ಎಂದು ಎಸಿಪಿ ರಾಹುಲ್ ಶ್ರೀವಾಸ್ತವ್ ಹೇಳಿದ್ದಾರೆ.