ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಬೆಂಬಲಿಗರು ಶಾಹಿನ್ ಬಾಗ್ನಲ್ಲಿ ನಡೆಯುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಗಳನ್ನು ಆಯೋಜಿಸುವ ಮೂಲಕ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಿಡಿಕಾರಿದ್ದಾರೆ.
ಕೇಜ್ರಿವಾಲ್ ಮತ್ತು ಬೆಂಬಲಿಗರು ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ: ಯೋಗಿ ಆದಿತ್ಯನಾಥ್
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಬೆಂಬಲಿಗರು ಶಾಹಿನ್ ಬಾಗ್ನಲ್ಲಿ ನಡೆಯುತ್ತಿರುವ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಗಳನ್ನು ಆಯೋಜಿಸುವ ಮೂಲಕ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಸುತ್ತಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಿಡಿಕಾರಿದ್ದಾರೆ.
ಯೋಗಿ ಆದಿತ್ಯನಾಥ್
ದೆಹಲಿಯ ಬದ್ರಾಪುರ್ ಪ್ರದೇಶದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ, ಕಾಂಗ್ರೆಸ್ ಮತ್ತು ಎಎಪಿ ಪಕ್ಷಗಳು ಬಿರುಸಿನ ಪ್ರಚಾರ ಕೈಗೊಂಡಿದ್ದು, ಪರಸ್ಪರ ಅರೋಪ ಪ್ರತ್ಯಾರೋಪದಲ್ಲಿ ತೊಡಗಿದೆ.
ದೆಹಲಿಯ ಶಾಹಿನ್ ಬಾಗ್ನಲ್ಲಿ 2019 ಡಿಸೆಂಬರ್ 15ರಿಂದ ಸಿಎಎ ಮತ್ತು ಎನ್ಪಿಆರ್ ವಿರುದ್ಧ ಮಹಿಳೆಯರು, ಮಕ್ಕಳು ಸೇರಿದಂತೆ ನೂರಾರು ಜನರು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಿರಂತರ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.