ಲಖನೌ( ಉತ್ತರಪ್ರದೇಶ): ಉತ್ತರ ಪ್ರದೇಶದ ಹಥ್ರಾಸ್ನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣಕ್ಕೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಯೋಗಿ ಆದಿತ್ಯನಾಥ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ, ಡಿಎಸ್ಪಿ, ಇನ್ಸ್ಪೆಕ್ಟರ್ ಹಾಗೂ ಕೆಲ ಅಧಿಕಾರಿಗಳನ್ನ ಅಮಾನತು ಮಾಡಿ ಆದೇಶ ಹೊರಹಾಕಿದೆ. ಪ್ರಕರಣದಲ್ಲಿ ಕೆಲವು ಅಧಿಕಾರಿಗಳು ವಿಳಂಬ ಹಾಗೂ ನಿರ್ಲಕ್ಷ್ಯ ತೋರಿದ್ದಾರೆ ಎಂದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.