ಲಖನೌ:ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ರ ತಂದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಯೋಗಿ ಆದಿತ್ಯನಾಥ್ಗೆ ಪಿತೃ ವಿಯೋಗ... ಅಂತ್ಯಕ್ರಿಯೆಯಲ್ಲಿ ಭಾಗಿಯಾಗ್ತಿಲ್ಲ ಸಿಎಂ - Anand Sing Bishth
ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ರ ತಂದೆ ಆನಂದ್ ಸಿಂಗ್ ಬಿಶ್ತ್, ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.

ಸಿಎಂ ಯೋಗಿ ಆದಿತ್ಯನಾಥ್ರ ತಂದೆ ನಿಧನ
ಅನಾರೋಗ್ಯದಿಂದ ಬಳಲುತ್ತಿದ್ದ ಸಿಎಂ ಯೋಗಿಯ ತಂದೆ ಆನಂದ್ ಸಿಂಗ್ ಬಿಶ್ತ್ ಅವರನ್ನು ಕಳೆದ ಕೆಲ ದಿನಗಳ ಹಿಂದೆ ದೆಹಲಿಯ ಏಮ್ಸ್ನಲ್ಲಿ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ ಅವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದು, ಕೋವಿಡ್ 19 ವಿರುದ್ಧ ಹೋರಾಟ ನಡೆಸುತ್ತಿರುವುದರಿಂದ ನಾಳೆ ನಡೆಯಲಿರುವ ತಮ್ಮ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಸಿಎಂ ಯೋಗಿ ತಿಳಿಸಿದ್ದಾರೆ.
Last Updated : Apr 20, 2020, 1:43 PM IST