ಲಕ್ನೋ:ಎರಡು ಕೋಟಿಗೂ ಹೆಚ್ಚು ಜನರಿಗೆ ಕೋವಿಡ್-19 ಪರೀಕ್ಷೆ ನಡೆಸಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಉತ್ತರ ಪ್ರದೇಶ ಪಾತ್ರವಾಗಿದೆ.
2 ಕೋಟಿ ಕೋವಿಡ್ ಪರೀಕ್ಷೆ ನಡೆಸಿದ ಯೋಗಿ ಆದಿತ್ಯನಾಥ್ ಸರ್ಕಾರ
ಉತ್ತರ ಪ್ರದೇಶಲ್ಲಿ ಎರಡು ಕೋಟಿಗೂ ಹೆಚ್ಚು ಜನರನ್ನು ಕೊರೊನಾ ಪರೀಕ್ಷೆ ಮಾಡಲಾಗಿದ್ದು, ದೇಶದಲ್ಲೇ ಹೆಚ್ಚು ಕೋವಿಡ್-19 ಪರೀಕ್ಷೆ ಮಾಡಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಈ ಕುರಿತು ವೈದ್ಯಕೀಯ ಮತ್ತು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಮಿತ್ ಮೋಹನ್ ಪ್ರಸಾದ್ ಮಾಹಿತಿ ನೀಡಿದ್ದು, ಬೇರೆ ಯಾವ ರಾಜ್ಯವು ಈವರೆಗೆ ಇಷ್ಟು ಪ್ರಮಾಣದಲ್ಲಿ ಕೊರೊನಾ ಪರೀಕ್ಷೆಯನ್ನು ನಡೆಸಿಲ್ಲ. ಕೋವಿಡ್-19 ವೈರಸ್‌ನ ಎರಡನೇ ಅಲೆಯನ್ನು ನಿಯಂತ್ರಿಸುವ ಸಲುವಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆವರು ಹೆಚ್ಚು ಪರೀಕ್ಷೆಗೆ ಒತ್ತು ನೀಡುತ್ತಿದ್ದಾರೆ. ಈ ಹಿನ್ನೆಲೆ ಹೆಚ್ಚಿನ ಪ್ರಮಾಣದಲ್ಲಿ ಗಂಟಲು ದ್ರವದ ಮಾದರಿ ಸಂಗ್ರಹ, ಟ್ರ್ಯಾಕಿಂಗ್ ಮತ್ತು ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದರು.
ಇನ್ನು ಉತ್ತರಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 29 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು, 325 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.