ಲಕ್ನೋ:ಲಾಕ್‌ಡೌನ್ ಮಧ್ಯೆ ಸ್ಥಗಿತಗೊಂಡಿರುವ ರಾಜ್ಯದ ಆರ್ಥಿಕ ಚಟುವಟಿಕೆಗಳನ್ನು ಪುನರುಜ್ಜೀವನಗೊಳಿಸಲು ರಾಜ್ಯದ ವಿವಿಧ ಕೈಗಾರಿಕೆಗಳಿಗೆ ಮೂರು ವರ್ಷಗಳ ಕಾಲ ವಿವಿಧ ಕಾರ್ಮಿಕ ಕಾನೂನುಗಳಿಂದ ವಿನಾಯಿತಿ ನೀಡಿ ಸುಗ್ರೀವಾಜ್ಞೆಗೆ ಉತ್ತರ ಪ್ರದೇಶ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬುಧವಾರ ಸುಗ್ರೀವಾಜ್ಞೆಯನ್ನು ಅಂಗೀಕರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.
ರಾಷ್ಟ್ರವ್ಯಾಪಿ ಲಾಕ್ಡೌನ್ನಿಂದ ಎಲ್ಲಾ ಕೆಲಸ ಕಾರ್ಯಗಳು ಸ್ಥಗಿತಗೊಂಡಿರುವುದರಿಂದ ವಿವಿಧ ಕೈಗಾರಿಕೆಗಳನ್ನು ಪುನರುಜ್ಜೀವನಗೊಳಿಸುವ ಮತ್ತು ಹೆಚ್ಚಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಈ ಸುಗ್ರೀವಾಜ್ಞೆ ಒಪ್ಪಿಗೆಗಾಗಿ ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರಿಗೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕೈಗಾರಿಕಾ ಮತ್ತು ಆರ್ಥಿಕ ಚಟುವಟಿಕೆಗಳಿಗೆ ಪ್ರಚೋದನೆಯನ್ನು ನೀಡುವ ಅವಶ್ಯಕತೆಯಿದೆ. ಅಸ್ತಿತ್ವದಲ್ಲಿರುವ ಉದ್ಯಮವನ್ನು ಮತ್ತೆ ಜಾರಿಗೆ ತರುವುದರ ಜೊತೆಗೆ ಹೆಚ್ಚಿನ ಹೂಡಿಕೆ ಅವಕಾಶಗಳನ್ನು ಸೃಷ್ಟಿಸಲಾಗುತ್ತದೆ ಎಂದು ವಕ್ತಾರರು ಹೇಳಿದರು.