ಹೈದರಾಬಾದ್:ವಿಶ್ವದ ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ಮುಂಚೂಣಿಯಲ್ಲಿರುವ ಅಮೆರಿಕದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 94,000 ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಮಾಹಿತಿ ನೀಡಿದೆ.
ಇತ್ತ ಅಧ್ಯಕ್ಷೀಯ ಚುನಾವಣೆಗೆ ಅಮೆರಿಕ ಸಜ್ಜಾಗುತ್ತಿದ್ದು, ಅತ್ತ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಇದೆ. ಮೊನ್ನೆ 91 ಸಾವಿರ ಕೋವಿಡ್ ಪ್ರಕರಣಗಳು, ನಿನ್ನೆ 94 ಸಾವಿರ ಕೇಸ್ ವರದಿಯಾಗಿವೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 93,16,297 ಇದ್ದು, ಮೃತರ ಸಂಖ್ಯೆ 2,35,159ಕ್ಕೆ ಏರಿಕೆಯಾಗಿದೆ.
ಪ್ರಪಂಚದಾದ್ಯಂತ ಬರೋಬ್ಬರಿ 4,58,98,590 ಜನರು ವೈರಸ್ ಸುಳಿಯಲ್ಲಿ ಸಿಲುಕಿದ್ದು, 11,93,744 ಸೋಂಕಿತರು ಮೃತಪಟ್ಟಿದ್ದಾರೆ. ಆದರೆ ಸೋಂಕಿತರ ಪೈಕಿ 3,32,48,821 ಮಂದಿ ಗುಣಮುಖರಾಗಿದ್ದಾರೆ.
ಕೇಸ್ಗಳ ಪೈಕಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ಈವರೆಗೆ 81,36,166 ಕೇಸ್ಗಳು ಪತ್ತೆಯಾಗಿದ್ದು, 1,21,681 ಜನರು ವೈರಸ್ಗೆ ಬಲಿಯಾಗಿದ್ದಾರೆ. ಮೂರನೇ ಸ್ಥಾನದಲ್ಲಿರುವ ಬ್ರೆಜಿಲ್ನಲ್ಲಿ 55,19,528 ಪ್ರಕರಣಗಳು ಹಾಗೂ 1,59,562 ಸಾವುಗಳು ವರದಿಯಾಗಿವೆ. 4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 15,99,976 ಕೇಸ್ಗಳಿದ್ದು, 27,656 ಜನರು ಸಾವನ್ನಪ್ಪಿದ್ದಾರೆ. ಒಟ್ಟು 188 ರಾಷ್ಟ್ರಗಳು ಕೋವಿಡ್ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ ಪೀಡಿತ ವಿಶ್ವದ ಟಾಪ್ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.
ಗ್ಲೋಬಲ್ ಕೋವಿಡ್-19 ಟ್ರ್ಯಾಕರ್ ಕೋವಿಡ್ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಬೆರಳೆಣಿಕೆಯಷ್ಟು ಕೇಸ್ಗಳು ಪತ್ತೆಯಾಗುತ್ತಿವೆ. 2019ರ ಡಿಸೆಂಬರ್ನಿಂದ ಈವರೆಗೆ ಚೀನಾದಲ್ಲಿ 85,973 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.