ಲಖನೌ :ಉತ್ತರಪ್ರದೇಶದ ಆರೋಗ್ಯ ಸಚಿವ ಜೈ ಪ್ರತಾಪ್ ಸಿಂಗ್ಗೆ ಕೋವಿಡ್ ಸೋಂಕು ತಗುಲಿರುವುದು ದೃಢವಾಗಿದೆ.
ಯುಪಿ ಆರೋಗ್ಯ ಸಚಿವರಿಗೂ ಕೊರೊನಾ ಪಾಸಿಟಿವ್ - ಜೈ ಪ್ರತಾಪ್ ಸಿಂಗ್
ರಾಜ್ಯಗಳ ಆರೋಗ್ಯ ಸಚಿವರಿಗೇ ಮಹಾಮಾರಿ ಕೊರೊನಾ ಸೋಂಕು ತಗುಲುತ್ತಿದ್ದು, ಇದೀಗ ಉತ್ತರ ಪ್ರದೇಶದ ಆರೋಗ್ಯ ಸಚಿವ ಜೈ ಪ್ರತಾಪ್ ಸಿಂಗ್ರ ವರದಿ ಪಾಸಿಟಿವ್ ಬಂದಿದೆ..

ಉತ್ತರ ಪ್ರದೇಶದ ಆರೋಗ್ಯ ಸಚಿವ ಜೈ ಪ್ರತಾಪ್ ಸಿಂಗ್
ಸಣ್ಣ ಜ್ವರ ಬಂದಿದ್ದರಿಂದ ಸಚಿವ ಜೈ ಪ್ರತಾಪ್ ಸಿಂಗ್ ಕೊರೊನಾ ಟೆಸ್ಟ್ಗೆ ಒಳಗಾಗಿದ್ದರು. ಇದೀಗ ವರದಿ ಪಾಸಿಟಿವ್ ಬಂದಿದ್ದು, ಅವರ ಕುಟುಂಬ ಸದಸ್ಯರಿಗೂ ಪರೀಕ್ಷೆ ನಡೆಸಲಾಗಿದೆ.
ರಾಜ್ಯದಲ್ಲಿ ಈವರೆಗೆ 58,104 ಮಂದಿ ಸೋಂಕಿತರು ಪತ್ತೆಯಾಗಿದ್ದು, 1,298 ಜನರು ಬಲಿಯಾಗಿದ್ದಾರೆ.