ಗೌತಮ ಬುದ್ಧ ನಗರ(ಉತ್ತರ ಪ್ರದೇಶ):ಲಾಕ್ಡೌನ್ ಪರಿಸ್ಥಿತಿ ನಿಭಾಯಿಸಲು ನಗರದಲ್ಲಿ ನಿಯೋಜನೆಗೊಂಡಿದ್ದ ಪೊಲೀಸ್ ಪೇದೆಯೊಬ್ಬರು ಹಠಾತ್ ಆರೋಗ್ಯದಲ್ಲಿ ಏರುಪೇರು ಕಂಡು ಬಳಿಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಆರೋಗ್ಯದಲ್ಲಿ ಏರುಪೇರಾಗಿ ಲಾಕ್ಡೌನ್ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ಸಾವು! - ಲಾಕ್ ಡೌನ್ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ಸಾವು
ಉತ್ತರ ಪ್ರದೇಶದ ಗೌತಮ ಬುದ್ಧ ನಗರದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಪೇದೆಯೊಬ್ಬರು ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ರೋಹಿತ್ ಕುಮಾರ್ ಸಾವನ್ನಪ್ಪಿದ ಪೊಲಿಸ್ ಪೇದೆ. ಇವರು 2011ರಲ್ಲಿ ಉತ್ತರ ಪ್ರದೇಶ ಪೊಲೀಸ್ ಇಲಾಖೆಗೆ ಕರ್ತವ್ಯಕ್ಕೆ ಸೇರಿದ್ದರು. ಕಳೆದ ಸೋಮವಾರ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆ ರೋಹಿತ್ ಕುಮಾರ್ ಅವರನ್ನು ಗ್ರೇಟರ್ ನೋಯ್ಡಾದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಚೇತರಿಕೆ ಕಂಡು ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಆದರೆ ಸಂಜೆ ವೇಳೆಗೆ ಮತ್ತೆ ಆರೋಗ್ಯ ಹದಗೆಟ್ಟ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಪೇದೆ ಕೊನೆಯುಸಿರೆಳೆದಿದ್ದಾರೆ.
ಗೌತಮ ಬುದ್ಧ ನಗರದಲ್ಲಿ ಲಾಕ್ಡೌನ್ ಪರಿಸ್ಥಿತಿ ನಿಭಾಯಿಸಲು ಎಸಿಪಿಯೊಂದಿಗೆ ಇವರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಮೃತ ಪೇದೆ ಶಾಮ್ಲಿ ಜಿಲ್ಲೆಯ ಲಿಸಾಡ್ ಗ್ರಾಮದವರಾಗಿದ್ದು, ಪತ್ನಿ ಮತ್ತು ಒಂದು ವರ್ಷದ ಮಗಳನ್ನು ಅಗಲಿದ್ದಾರೆ.