ಉತ್ತರಾಖಂಡ:ಮೇಘ ಸ್ಫೋಟಗೊಂಡು ಮೂವರು ಮೃತಪಟ್ಟಿದ್ದು, 11 ಮಂದಿ ನಾಪತ್ತೆಯಾಗಿರುವ ಘಟನೆ ಉತ್ತರಾಖಂಡ್ನ ಪಿಥೋರಗರ್ ಜಿಲ್ಲೆಯ ಮ್ಯಾಡ್ಕೋಟ್ ಎಂಬ ಗ್ರಾಮದಲ್ಲಿ ನಡೆದಿದೆ.
ಜಿಲ್ಲಾಡಳಿತದ ಸಿಬ್ಬಂದಿ, ರಾಜ್ಯ ವಿಪತ್ತು ನಿರ್ವಹಣಾ ತಂಡ ಸೇರಿದಂತೆ ಇತರ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಪಿಥೋರಗರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ವಿ.ಕೆ.ಜೋಗ್ದಾಂಡೆ ತಿಳಿಸಿದ್ದಾರೆ.
ರಾಜ್ಯದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಮೂವರು ಬಲಿಯಾಗಿದ್ದಾರೆ. ಐದು ಮನೆಗಳು ಕುಸಿದು ಬಿದ್ದಿವೆ. 11 ಜನರು ಕಾಣೆಯಾಗಿದ್ದಾರೆ. ರಸ್ತೆ ಸಂಪರ್ಕ ಕಡಿತವಾಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಮೊಬೈಲ್ ನೆಟ್‌ವರ್ಕ್ ಮತ್ತು ಟೆಲಿಕಾಂ ಸೇವೆಗಳ ಮೇಲೂ ಪರಿಣಾಮ ಬೀರಿದೆ ಎಂದು ಜೋಗ್ದಾಂಡೆ ಹೇಳಿದ್ದಾರೆ.
2013ರಲ್ಲಿ ಮೇಘ ಸ್ಫೋಟಗೊಂಡು ಪ್ರವಾಹ -ಭೂ ಕುಸಿತ ಸಂಭವಿಸಿ ಉತ್ತರಾಖಂಡ್ನಲ್ಲಿ 1000ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದರು.