ಡೆಹ್ರಾಡೂನ್ (ಉತ್ತರಾಖಂಡ): ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರ ಕೋವಿಡ್-19 ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಸೋಂಕಿಗೆ ಒಳಗಾಗಿರುವ ರಾಜ್ಯ ಪ್ರವಾಸೋದ್ಯಮ ಸಚಿವರೊಂದಿಗೆ ಸಭೆ ನಡೆಸಿದ ಬಳಿಕ ಅವರು ಕ್ವಾರಂಟೈನ್ಗೆ ಒಳಗಾಗಿದ್ದರು.
ಉತ್ತರಾಖಂಡ ಮುಖ್ಯಮಂತ್ರಿಯ ಕೋವಿಡ್-19 ಪರೀಕ್ಷಾ ವರದಿ ನೆಗೆಟಿವ್..
ಮುಖ್ಯಮಂತ್ರಿಯ ಪರೀಕ್ಷಾ ವರದಿಗಳು ಅವರು ವೈರಸ್ ಸೋಂಕಿಗೆ ಒಳಗಾಗಿಲ್ಲ ಎಂದು ಖಚಿತಪಡಿಸುತ್ತದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕಳೆದ ವಾರ ರಾಜ್ಯ ಪ್ರವಾಸೋದ್ಯಮ ಸಚಿವ ಸತ್ಪಾಲ್ ಮಹಾರಾಜ್, ಅವರ ಪತ್ನಿ ಮತ್ತು ಅವರ ಕುಟುಂಬದ ಇತರ ಐವರು ಸದಸ್ಯರಿಗೆ ಕೊರೊನಾ ಇರುವುದು ದೃಢಪಟ್ಟಿತ್ತು.

ಕೂಡಲೇ ಸತ್ಪಾಲ್ ಮಹಾರಾಜ್ ಅವರ ಸಂಪರ್ಕಕ್ಕೆ ಬಂದಿದ್ದ ಮುಖ್ಯಮಂತ್ರಿ ಮತ್ತು ಅವರ ಮೂವರು ಕ್ಯಾಬಿನೆಟ್ ಸಹೋದ್ಯೋಗಿಗಳಾದ ಸುಬೋಧ್ ಯೂನಿಯಲ್, ಹರಾಕ್ ಸಿಂಗ್ ರಾವತ್ ಮತ್ತು ಮದನ್ ಕೌಶಿಕ್ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದರು. ಇದೀಗ ಅವರೆಲ್ಲರ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ.