ರಾಣಿಖೇತ್(ಉತ್ತರಾಖಂಡ):ಸಾಮಾನ್ಯವಾಗಿ ಕೊತ್ತಂಬರಿ ಗಿಡ ಒಂದರಿಂದ ಮೂರು ಅಡಿ ಎತ್ತರ ಬೆಳೆಯುವುದು ಸಾಮಾನ್ಯ. ಆದರೆ ಇಲ್ಲೊಬ್ಬ ರೈತ ಬರೋಬ್ಬರಿ 7 ಅಡಿ ಉದ್ದ ( 2.16 ಮೀಟರ್) ಕೊತ್ತಂಬರಿ ಗಿಡ ಬೆಳೆದು ಗಿನ್ನಿಸ್ ದಾಖಲೆ ನಿರ್ಮಿಸಿದ್ದಾನೆ.
ಉತ್ತರಾಖಂಡದ ರಾಣಿಖೇತ್ನ ರೈತ ಗೋಪಾಲ್ ದತ್ ಈ ಸಾಧನೆ ಮಾಡಿರುವ ಪ್ರಗತಿಪರ ರೈತ. ಸಾವಯವ ಕೃಷಿ ಪದ್ಧತಿ ಮೂಲಕ 2.16 ಮೀಟರ್ ಉದ್ಧವಾದ ಕೊತ್ತಂಬರಿ ಗಿಡ ಬೆಳೆಸಿದ್ದು, ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನಲ್ಲಿ ತಮ್ಮ ಹೆಸರು ಸೇರಿಸಿದ್ದಾರೆ. ಇದು ವಿಶ್ವದಲ್ಲೇ ಅತಿ ಎತ್ತರವಾಗಿ ಬೆಳೆದ ಕೊತ್ತಂಬರಿ ಗಿಡ ಎಂಬುದು ಗಮನಾರ್ಹ ಸಂಗತಿಯಾಗಿದೆ.