ಕರ್ನಾಟಕ

karnataka

ETV Bharat / bharat

ಬಿಜೆಪಿ ಶಾಸಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ - ಉತ್ತರಾಖಂಡ ಲೇಟೆಸ್ಟ್ ನ್ಯೂಸ್

ಬಿಜೆಪಿ ಶಾಸಕ ತನ್ನೊಂದಿಗೆ ಎರಡು ವರ್ಷಗಳಿಂದ ದೈಹಿಕ ಸಂಬಂಧ ಬೆಳೆಸಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ.

Woman accuses BJP MLA of sexual exploitation
ಬಿಜೆಪಿ ಶಾಸಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ

By

Published : Aug 16, 2020, 10:34 AM IST

ಡೆಹ್ರಾಡೂನ್: ಉತ್ತರಾಖಂಡದ ಬಿಜೆಪಿ ಶಾಸಕರೊಬ್ಬರು ಎರಡು ವರ್ಷಗಳಿಂದ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಈ ಮಧ್ಯೆ, ಶಾಸಕರ ಪತ್ನಿ, ಮಹಿಳೆ ಮತ್ತು ಇತರ ನಾಲ್ವರ ವಿರುದ್ಧ ಡೆಹ್ರಾಡೂನ್‌ನ ನೆಹರು ಕಾಲೋನಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಆರೋಪ ಮಾಡಿದ ಮಹಿಳೆ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಬಿಜೆಪಿ ಶಾಸಕ ತನ್ನೊಂದಿಗೆ ಎರಡು ವರ್ಷಗಳಿಂದ ದೈಹಿಕ ಸಂಬಂಧ ಬೆಳೆಸಿದ್ದಾರೆ ಎಂದು ದೂರಿದ್ದಾರೆ.

ತನ್ನ ಮಗಳ ಡಿಎನ್‌ಎ ಮಾದರಿ ತನ್ನ ಗಂಡನ ಮಾದರಿಯೊಂದಿಗೆ ಹೊಂದಿಕೆಯಾಗದಿದ್ದರೆ, ಶಾಸಕರ ಡಿಎನ್​ಎ ಜೊತೆ ಹೊಂದಿಕೆಯಾಗಬೇಕು ಎಂದು ಸಂತ್ರಸ್ತೆ ಹೇಳಿದ್ದಾರೆ. ಬಿಜೆಪಿ ಶಾಸಕರ ಪತ್ನಿ ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಡೆಹ್ರಾಡೂನ್ ಎಸ್​ಎಸ್‌ಪಿ ಅರುಣ್ ಮೋಹನ್ ಜೋಶಿ ತಿಳಿಸಿದ್ದಾರೆ.

ABOUT THE AUTHOR

...view details