ನವದೆಹಲಿ:ಸಂಕ್ರಾಂತಿ ಹಬ್ಬಕ್ಕೆ ಕೇಂದ್ರ ಸರ್ಕಾರ ದೇಶದ ಜನರಿಗೆ ಭರ್ಜರಿ ಗಿಫ್ಟ್ ನೀಡಿದ್ದು, ಜನವರಿ 16ರಿಂದ ದೇಶಾದ್ಯಂತ ಕೊರೊನಾ ಲಸಿಕೆ ಹಂಚಿಕೆ ಮಾಡಲು ನಿರ್ಧರಿಸಿದೆ. ಇದಕ್ಕೆ ಸಂಬಂಧಿಸಿದಂತೆ ಇಂದು ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿದರು.
ಸಂಕ್ರಾಂತಿಗೆ ಕೇಂದ್ರದ ಭರ್ಜರಿ ಗಿಫ್ಟ್: ಜ.16ರಿಂದ ದೇಶಾದ್ಯಂತ ಕೊರೊನಾ ಲಸಿಕೆ ಹಂಚಿಕೆ
16:33 January 09
ಸಂಕ್ರಾಂತಿಗೆ ದೇಶದ ಜನರಿಗೆ ಸಿಕ್ತು ಮಹತ್ವದ ಗಿಫ್ಟ್
ಓದಿ: ಕೋವಿಡ್ ಮೊದಲ ಚುಚ್ಚುಮದ್ದು ಪಡೆದ ಸೌದಿ ಅರೇಬಿಯಾ ದೊರೆ ಸಲ್ಮಾನ್!
ಮೊದಲ ಹಂತದಲ್ಲಿ ದೇಶದಲ್ಲಿ 3 ಕೋಟಿ ವಾರಿಯರ್ಸ್ಗೆ ಕೊರೊನಾ ಲಸಿಕೆ ನೀಡಲು ನಿರ್ಧರಿಸಲಾಗಿದ್ದು, ತದನಂತರ 50 ವರ್ಷ ಮೇಲ್ಪಟ್ಟವರಿಗೆ ಈ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಆರಂಭದಲ್ಲಿ ಆರೋಗ್ಯ ಕಾರ್ಯಕರ್ತರು, ಫ್ರಂಟ್ಲೈನ್ ಸಿಬ್ಬಂದಿ ಈ ಲಸಿಕೆ ಪಡೆದುಕೊಳ್ಳಲಿದ್ದಾರೆ.
ಲಸಿಕೆ ಹಂಚಿಕೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಉನ್ನತ ಮಟ್ಟದ ಸಭೆ ನಡೆಸುತ್ತಿದ್ದು, ಆರೋಗ್ಯ ಇಲಾಖೆ ಕಾರ್ಯದರ್ಶಿ, ಕೇಂದ್ರ ಸಚಿವ ಸಂಪುಟದ ಕಾರ್ಯದರ್ಶಿ, ಪ್ರಧಾನಿ ಮುಖ್ಯ ಕಾರ್ಯದರ್ಶಿ ಸೇರಿದಂತೆ ಕೆಲ ಹಿರಿಯ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ. ಇದುವರೆಗೆ ದೇಶದಲ್ಲಿ 79 ಲಕ್ಷ ಫಲಾನುಭವಿಗಳು ಕೊರೊನಾ ಲಸಿಕೆ ಪಡೆದುಕೊಳ್ಳಲು ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಕೋವಿನ್ ಆ್ಯಪ್ನಲ್ಲಿ ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡಿದ್ದಾರೆ.
ದೇಶದಲ್ಲಿ 27 ಕೋಟಿ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಸೋಮವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಇದೇ ವಿಚಾರವಾಗಿ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದ ಸಿಎಂಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದು, ಕೆಲವೊಂದು ಸೂಚನೆ ನೀಡುವ ಸಾಧ್ಯತೆ ಇದೆ.