ನವದೆಹಲಿ: ದೇಶದಲ್ಲಿ ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಪ್ರಧಾನಿ ಮೋದಿ, ಸರ್ವಪಕ್ಷಗಳ ಜತೆ ಇಂದು ಸಭೆ ನಡೆಸಿದರು. ಬಳಿಕ ದೇಶಾದ್ಯಂತ ಲಸಿಕೆ ನೀಡುವ ಬಗ್ಗೆ ಮಾಹಿತಿ ನೀಡಿದರು.
ಭಾರತದಲ್ಲಿ ಶೀಘ್ರದಲ್ಲೇ ಕೋವಿಡ್ ಲಸಿಕೆ ಲಭ್ಯ: ಪ್ರಧಾನಿ ಮೋದಿ
ದೇಶದಲ್ಲಿ ಮುಂದಿನ ಕೆಲ ವಾರಗಳಲ್ಲೇ ಕೋವಿಡ್ ವ್ಯಾಕ್ಸಿನ್ ಲಭ್ಯವಾಗಲಿದೆ ಅಂತಾ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೊದಲಿಗೆ ಆರೋಗ್ಯ ಇಲಾಖೆ ಸಿಬ್ಬಂದಿ, ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ, ವೃದ್ಧರಿಗೆ ವ್ಯಾಕ್ಸಿನ್ ನೀಡಲಾಗುವುದು. ಈಗಾಗಲೇ ಲಸಿಕೆ ಹಂಚುವಿಕೆಗೆ ಎಲ್ಲ ರೀತಿಯ ಸಿದ್ಧತೆಗಳು ನಡೆದಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕಾರ್ಯ ನಿರ್ವಹಿಸಲಿವೆ ಎಂದರು.
ವೈದ್ಯರು ಹಾಗೂ ವಿಜ್ಞಾನಿಗಳ ತಂಡ ಕೋವಿಡ್ ಲಸಿಕೆಗಾಗಿ ಹಗಲಿರುಳು ಶ್ರಮಿಸುತ್ತಿದ್ದು, ಮುಂದಿನ ಕೆಲವು ವಾರಗಳಲ್ಲಿ ವ್ಯಾಕ್ಸಿನ್ ಲಭ್ಯವಾಗಲಿದೆ ಅಂತಾ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವಿಜ್ಞಾನಿಗಳ ತಂಡ ವ್ಯಾಕ್ಸಿನ್ ಪ್ರಯೋಗ ನಡೆಸುತ್ತಿದ್ದು, ಅವರು ಗ್ರೀನ್ ಸಿಗ್ನಲ್ ನೀಡಿದ ಕೂಡಲೇ ಲಸಿಕೆ ವಿತರಣೆ ಪ್ರಾರಂಭವಾಗಲಿದೆ ಎಂದರು.
ಮೊದಲಿಗೆ ಆರೋಗ್ಯ ಇಲಾಖೆ ಸಿಬ್ಬಂದಿ, ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ, ವೃದ್ಧರಿಗೆ ವ್ಯಾಕ್ಸಿನ್ ನೀಡಲಾಗುವುದು. ಈಗಾಗಲೇ ಲಸಿಕೆ ಹಂಚುವಿಕೆಗೆ ಎಲ್ಲ ರೀತಿಯ ಸಿದ್ಧತೆಗಳು ನಡೆದಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕಾರ್ಯ ನಿರ್ವಹಿಸಲಿವೆ. ಇತರೆ ದೇಶಗಳಿಗೆ ಹೋಲಿಸಿದರೆ, ವ್ಯಾಕ್ಸಿನೇಷನ್ ಕ್ಷೇತ್ರದಲ್ಲಿ ನಮ್ಮಲ್ಲಿ ಬಹಳ ದೊಡ್ಡ ಮತ್ತು ಅನುಭವಿ ಜಾಲವಿದ್ದು ನಾವದನ್ನು ಸಂಪೂರ್ಣವಾಗಿ ಬಳಸಿಕೊಳ್ಳುತ್ತೇವೆ ಎಂದು ಪ್ರಧಾನಿ ಹೇಳಿದರು.
TAGGED:
Vaccine to be ready soon