ಇಂದೋರ್:ಮಧ್ಯಪ್ರದೇಶದ ಆರ್ಥಿಕ ರಾಜಧಾನಿಯಾದ ಇಂದೋರ್‌ನ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ದಿನಗಳ ಹಿಂದೆ ಯುವಕನೋರ್ವ ಕೊಲೆಗೀಡಾಗಿದ್ದ. ಆತನನ್ನು ಹೊಡೆದು ಕೊಂದಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಇಂದೋರ್‌ನ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ದಿಲೀಪ್ ನಗರದಲ್ಲಿ ಈ ಘಟನೆ ನಡೆದಿತ್ತು. ತಮ್ಮ ಮಗಳಿಗೆ ಕಿರುಕುಳ ನೀಡ್ತಿದ್ದ ಎಂಬ ಕಾರಣಕ್ಕೆ ಎದುರು ಮನೆ ಯುವಕನನ್ನು ಕುಟುಂಬಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದರು. ಈ ವೇಳೆ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಯುವಕ ಸಾವನ್ನಪ್ಪಿದ್ದಾನೆ. ಘಟನೆ ನಡೆದು ಎರಡು ದಿನಗಳ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಯುವಕನಿಗೆ ಥಳಿಸಿದ್ದು ಎನ್ನಲಾಗ್ತಿರುವ ವಿಡಿಯೋ ಸದ್ದು ಮಾಡ್ತಿದೆ.