ಚಂಡೀಗಢ(ಪಂಜಾಬ್): 1987ರ ಬ್ಯಾಚ್ನ ಐಎಎಸ್ ಅಧಿಕಾರಿ ವಿನಿ ಮಹಾಜನ್ ಪಂಜಾಬ್ನ ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಕೇಂದ್ರ ಹಾಗೂ ಪಂಜಾಬ್ ಸರ್ಕಾರದಲ್ಲಿ ಒಟ್ಟು 33 ವರ್ಷಗಳ ಅನುಭವ ಹೊಂದಿದ್ದಾರೆ.
ಪಂಜಾಬ್ನ ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ವಿನಿ ಮಹಾಜನ್ ಅಧಿಕಾರ ಸ್ವೀಕಾರ!
ಇದೇ ಮೊದಲ ಬಾರಿಗೆ ಪಂಜಾಬ್ನ ಮುಖ್ಯ ಕಾರ್ಯದರ್ಶಿಯಾಗಿ ಮಹಿಳಾ ಅಧಿಕಾರಿವೊಬ್ಬರು ಆಯ್ಕೆಗೊಂಡಿದ್ದಾರೆ.
ಮುಖ್ಯ ಕಾರ್ಯದರ್ಶಿಯಾಗಿದ್ದ ಕರಣ್ ಅವತಾರ್ ಸಿಂಗ್ ಅವರ ಜಾಗಕ್ಕೆ ಇದೀಗ ಇವರು ಆಯ್ಕೆಯಾಗಿದ್ದಾರೆ. ಇಲ್ಲಿಯವರೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರು, ಕೈಗಾರಿಕೆ ಮತ್ತು ವಾಣಿಜ್ಯ, ಐಟಿ ಮತ್ತು ಆಡಳಿತ ಸುಧಾರಣೆ ಹಾಗೂ ಸಾರ್ವಜನಿಕ ವಲಯಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಕೋವಿಡ್ ಬಿಕ್ಕಟ್ಟಿನ ಸಮಯದಲ್ಲಿ ಆರೋಗ್ಯ ಇಲಾಖೆಯಲ್ಲೂ ನಿರ್ಣಾಯಕ ಪಾತ್ರ ನಿರ್ವಹಿಸಿದ್ದಾರೆ.
ವಿನಿ ಮಹಾಜನ್ ಅವರ ಪತಿ ಪಂಜಾಬ್ ಪೊಲೀಸ್ ಮುಖ್ಯಸ್ಥ ದಿನಕರ್ ಗುಪ್ತಾ. ಇವರ ಕೂಡ 1987ರ ಇಂಡಿಯನ್ ಪೊಲೀಸ್ ಸರ್ವೀಸ್(ಐಪಿಎಸ್) ಅಧಿಕಾರಿ. ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಪತ್ನಿ ಹಾಗೂ ಪತಿ ಉನ್ನತ ಹುದ್ದೆ ಹೊಂದಿದ್ದಾರೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ವೇಳೆ ವಿನಿ ಮಹಾಜನ್ ಕೇಂದ್ರದಲ್ಲಿ ಸೇವೆ ಸಲ್ಲಿಸಿದ್ದು, ಹಣಕಾಸು, ಕೈಗಾರಿಕೆ ಮತ್ತು ವಾಣಿಜ್ಯ, ತಂತ್ರಜ್ಞಾನ, ಐಟಿ ವಲಯಗಳಲ್ಲಿ ಕೆಲಸ ಮಾಡಿದ್ದಾರೆ.