ಮುಂಬೈ:ಟೀಂ ಇಂಡಿಯಾ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಮನೀಷ್ ಪಾಂಡೆ ನಿನ್ನೆ ದಕ್ಷಿಣ ಭಾರತದ ಖ್ಯಾತ ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಭಾನುವಾರ ನಡೆದ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮನೀಶ್ ಪಾಂಡೆ ನೇತೃತ್ವದ ಕರ್ನಾಟಕ ರೋಚಕ ಗೆಲುವು ದಾಖಲಿಸುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದಾದ ಮರುದಿನವೇ ಅಂದರೆ ಸೋಮವಾರ ಮುಂಬೈನಲ್ಲಿ ವಿವಾಹೋತ್ಸವ ನೆರವೇರಿದೆ.