ಹೈದರಾಬಾದ್:ಭಾರತೀಯ ಕ್ರಿಕೆಟ್ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಲಘು ಹೃದಯಾಘಾತಕ್ಕೊಳಗಾಗಿದ್ದು, ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಓದಿ: ಸೌರವ್ ಗಂಗೂಲಿಗೆ ಲಘು ಹೃದಯಾಘಾತ: ಐಸಿಯುನಲ್ಲಿ ಮುಂದುವರೆದ ಚಿಕಿತ್ಸೆ
ಗಂಗೂಲಿ ಆಸ್ಪತ್ರೆಗೆ ದಾಖಲಾಗಿರುವ ಮಾಹಿತಿ ಗೊತ್ತಾಗುತ್ತಿದ್ದಂತೆ ಅನೇಕ ಕ್ರಿಕೆಟರ್ಸ್ ಹಾಗೂ ಅಭಿಮಾನಿಗಳು ಪ್ರಾರ್ಥನೆ ಮಾಡುತ್ತಿದ್ದು, ಟೀಂ ಇಂಡಿಯಾ ಕ್ಯಾಪ್ಟನ್ ಕೊಹ್ಲಿ, ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ಸೇರಿ ಹಲವರು ಟ್ವೀಟ್ ಮಾಡಿದ್ದಾರೆ.
ಶೀಘ್ರ ಗುಣಮುಖರಾಗಿ ದಾದಾ, ನೀವೂ ಬೇಗ ಚೇತರಿಸಿಕೊಳ್ಳುವಂತೆ ದೇವರಲ್ಲಿ ಕೇಳಿಕೊಳ್ಳುತ್ತೇನೆ ಎಂದು ಟೀಂ ಇಂಡಿಯಾ ಮಾಜಿ ಆಟಗಾರ ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.
ಗೆಟ್ ವೆಲ್ ಸೂನ್ ದಾದಾ, ನಿಮಗೆ ಹೃದಯಾಘಾತವಾಗಿರುವ ಸುದ್ದಿ ಕೇಳಿ ಶಾಕ್ ಆಗಿದೆ ಎಂದು ಮೊಹಮ್ಮದ್ ಕೈಫ್ ಟ್ವೀಟ್ ಮಾಡಿದ್ದಾರೆ.
ಮುಂಬೈ ಇಂಡಿಯನ್ಸ್, ಐಸಿಸಿ, ಪಾಕಿಸ್ತಾನದ ಕ್ರಿಕೆಟಿಗ ವಕಾರ್ ಯೂನಿಸ್, ಕೃನಾಲ್ ಪಾಂಡ್ಯ, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ಸೇರಿದಂತೆ ಅನೇಕ ಫ್ರಾಂಚೈಸಿ ಹಾಗೂ ಮಾಜಿ ಆಟಗಾರರು ಗಂಗೂಲಿ ಚೇತರಿಕೆಗೆ ಶುಭ ಹಾರೈಸಿದ್ದಾರೆ.
ಸದ್ಯ ಸೌರವ್ ಗಂಗೂಲಿಗೆ ಪ್ರಾಥಮಿಕ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೊಲ್ಕತ್ತಾದ ವುಡ್‌ಲ್ಯಾಂಡ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.