ನವದೆಹಲಿ:17ನೇ ಲೋಕಸಭೆಯ ಹಂಗಾಮಿ ಸಭಾಧ್ಯಕ್ಷರಾಗಿ ಮಧ್ಯಪ್ರದೇಶದ ಬಿಜೆಪಿ ಸಂಸದ ವೀರೇಂದ್ರ ಕುಮಾರ್ ಆಯ್ಕೆಯಾಗಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೀರೇಂದ್ರ ಕುಮಾರ್ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

65 ವರ್ಷದ ವೀರೇಂದ್ರ ಕುಮಾರ್ ಅವರು ಏಳನೇ ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದು, ಪ್ರಸ್ತುತ ಟಿಕಾಮಘಡ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಹಂಗಾಮಿ ಸ್ಪೀಕರ್ ಅವರು ನೂತನವಾಗಿ ಆಯ್ಕೆಯಾದ ಸಂಸದರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.
ಲೋಕಸಭೆಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಕೂಡ ಈ ಹಂಗಾಮಿ ಸ್ಪೀಕರ್ ಅಧ್ಯಕ್ಷತೆಯಲ್ಲೇ ನಡೆಯಲಿದೆ.