ನವದೆಹಲಿ: ಲೋಕಸಭೆ ಚುನಾವಣೆಯ ಶೋಚನೀಯ ಸೋಲಿನ ಬಳಿಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಆಂತರಿಕ ವಲಯದಲ್ಲಿ ಸಾಕಷ್ಟು ಹಿನ್ನಡೆ ಅನುಭವಿಸಿದ್ದು, ಇದೀಗ ಹಿರಿಯ ನಾಯಕ ವಿವೇಕ್ ತಂಖಾ ಎಐಸಿಸಿಯ ಕಾನೂನು ಮಾನವ ಹಕ್ಕುಗಳು ಮತ್ತು ಆರ್‌ಟಿಐ ಇಲಾಖೆಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆ ನೀಡಿದ ಬಳಿಕ ಟ್ವೀಟ್ ಮಾಡಿರುವ ವಿವೇಕ್ ತಂಖಾ, ಕಾಂಗ್ರೆಸ್ ಪಕ್ಷದಲ್ಲಿ ಅಮೂಲಾಗ್ರ ಬದಲಾವಣೆ ಮಾಡಿ, ಹೋರಾಟದ ಮನಸ್ಥಿತಿಯನ್ನು ತುಂಬಿ. ರಾಹುಲ್ ಗಾಂಧಿಯವರಲ್ಲಿ ಬದ್ಧತೆ ಇದೆ ಎಂದಿದ್ದಾರೆ.