ಶಿಮ್ಲಾ: ಹಿಮಾಚಲ ಪ್ರದೇಶದ 50 ನಗರ ಸ್ಥಳೀಯ ಸಂಸ್ಥೆಗಳಿಗೆ ಇಂದು ಮತದಾನ ನಡೆಯುತ್ತಿದೆ.
29 ಪುರಸಭೆಗಳು ಮತ್ತು 21 ನಗರ ಪಂಚಾಯಿತಿಗಳಿಗೆ ಚುನಾವಣೆ ನಡೆಯುತ್ತಿದ್ದು, ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. 4 ಗಂಟೆಯ ನಂತರ ಕೋವಿಡ್ ಸೋಂಕಿತರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಚುನಾವಣೆಯಲ್ಲಿ 1,196 ಅಭ್ಯರ್ಥಿಗಳು ಕಣದಲ್ಲಿದ್ದು, 416 ವಾರ್ಡ್ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುತ್ತದೆ. ನರ್ಕಂಡದಲ್ಲಿ 4 ಅಭ್ಯರ್ಥಿಗಳು ಮತ್ತು ಗಾಗ್ರೆಟ್ನಲ್ಲಿ ಒಬ್ಬ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದಂತೆ 411 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.