ಫ್ರೀಟೌನ್(ಸಿಯೆರಾ ಲಿಯೋನ್):ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹಾಗೂ ಸಿಯೆರಾ ಲಿಯೋನ್ ದೇಶದ ಅಧ್ಯಕ್ಷ ಜೂಲಿಯಸ್ ಮಾಡಾ ಬಯೋ, ಇಂದು ನಗರದಲ್ಲಿರುವ ರಾಜಭವನದಲ್ಲಿ ನಿಯೋಗ ಮಟ್ಟದ ಮಾತುಕತೆ ನಡೆಸಿದರು.
ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು-ಸಿಯೆರಾ ಲಿಯೋನ್ ಅಧ್ಯಕ್ಷ ಬಯೋ ಮಾತುಕತೆ - ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಸುದ್ದಿ
ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹಾಗೂ ಸಿಯೆರಾ ಲಿಯೋನ್ ಗಣರಾಜ್ಯದ ಅಧ್ಯಕ್ಷ ಜೂಲಿಯಸ್ ಮಾಡಾ ಬಯೋ, ಇಂದು ಫ್ರೀಟೌನ್ ನಗರದ ರಾಜಭವನದಲ್ಲಿ ನಿಯೋಗ ಮಟ್ಟದ ಮಾತುಕತೆ ನಡೆಸಿದರು. ಈ ಮಾತುಕತೆಯಲ್ಲಿ ಉಭಯ ನಾಯಕರು ದ್ವಿಪಕ್ಷೀಯ ಸಂಬಂಧ ವೃದ್ಧಿ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.

ನಿಯೋಗ ಮಟ್ಟದ ಮಾತುಕತೆ
ಈ ಮಾತುಕತೆಯಲ್ಲಿ ಉಭಯ ನಾಯಕರು ದ್ವಿಪಕ್ಷೀಯ ಸಂಬಂಧ ವೃದ್ಧಿ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.
ಬಳಿಕ ಮಾತನಾಡಿದ ವೆಂಕಯ್ಯ ನಾಯ್ಡು, ಉಭಯ ದೇಶಗಳ ನಡುವಿನ ಬಾಂಧವ್ಯ ವೃದ್ಧಿ ಹಾಗೂ ಜಾಗತಿಕ ಮತ್ತು ಪ್ರಾದೇಶಿಕ ವಿಷಯಗಳ ಕುರಿತು ಅಧ್ಯಕ್ಷ ಬಯೋ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದೇನೆ. ದೀರ್ಘಕಾಲಿಕ ದ್ವಿಪಕ್ಷೀಯ ಸ್ನೇಹ-ಸಂಬಂಧಗಳನ್ನು ಮತ್ತಷ್ಟು ಬೆಳೆಸುವ ಬದ್ಧತೆಯನ್ನು ಉಭಯ ನಾಯಕರು ವ್ಯಕ್ತಪಡಿಸಿದ್ದೇವೆ ಎಂದಿದ್ದಾರೆ.