ಜೋಧ್‌ಪುರ (ರಾಜಸ್ತಾನ) :ಅಮಲಿನಲ್ಲಿ ವ್ಯಕ್ತಿಯೊಬ್ಬ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳ ಮೇಲೆ ಹಲ್ಲೆ ಮಾಡಿದ್ದಾನೆ. ಮದ್ಯದ ಮತ್ತಿನಲ್ಲಿದ್ದ ಈತ ಪೊಲೀಸರ ಮೇಲೆ ಹಲ್ಲೆ ಎಸಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮತ್ತಿನ ಗಮ್ಮತ್ತಿನಲ್ಲಿ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ವ್ಯಕ್ತಿ: ವಿಡಿಯೋ ವೈರಲ್ - ರಾಜಸ್ಥಾನದಲ್ಲಿ ಪೊಲೀಸರ ಮೇಲೆ ಹಲ್ಲೆ ಸುದ್ದಿ
ಮಾಸ್ಕ್ ವಿಚಾರವಾಗಿ ನಡೆದ ಮಾತಿನ ಚಕಮಕಿಯಲ್ಲಿ ಆಕ್ರೋಶಗೊಂಡ ಮುಖೇಶ್ ಕುಮಾರ್, ಪೊಲೀಸರ ನಾಮಫಲಕಗಳನ್ನು ಮುರಿದು, ಅವರ ಸಮವಸ್ತ್ರವನ್ನು ಸಹ ಹರಿದು ಹಾಕಿದ್ದಾನೆ ಎಂದು ದೇವ್‌ನಗರ ಪೊಲೀಸ್ ಠಾಣೆಯ ಸ್ಟೇಷನ್ ಇನ್-ಚಾರ್ಜ್ ಸೋಮಕರನ್ ಆರೋಪಿಸಿದ್ದಾರೆ.
ಕೊರೊನಾ ಭೀತಿಯ ನಡುವೆ ಮಾಸ್ಕ್ ಧರಿಸದೇ ಓಡಾಡುತ್ತಿದ್ದ ಈತನನ್ನು ಪೊಲೀಸರು ಪ್ರಶ್ನಿಸಿದ್ದಕ್ಕೆ ಕೋಪಗೊಂಡ ಈತ ಅವರ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಈ ಘಟನೆ ದೇವ್‌ನಗರ ಪ್ರದೇಶದಲ್ಲಿ ನಡೆದಿದ್ದು, ಪ್ರತಾಪ್ ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್‌ಗಳ ಮೇಲೆ ಈತ ಹಲ್ಲೆ ನಡೆಸಿದ್ದಾನೆ. ಈತನನ್ನು ಮುಖೇಶ್ ಕುಮಾರ್(40) ಎಂದು ಗುರುತಿಲಾಗಿದೆ. ಮಾಸ್ಕ್ ವಿಚಾರವಾಗಿ ನಡೆದ ಮಾತಿನ ಚಕಮಕಿಯಲ್ಲಿ ಆಕ್ರೋಶಗೊಂಡ ಮುಖೇಶ್ ಕುಮಾರ್, ಪೊಲೀಸರ ನಾಮಫಲಕಗಳನ್ನು ಮುರಿದು, ಅವರ ಸಮವಸ್ತ್ರವನ್ನು ಸಹ ಹರಿದು ಹಾಕಿದ್ದಾನೆ ಎಂದು ದೇವ್‌ನಗರ ಪೊಲೀಸ್ ಠಾಣೆಯ ಸ್ಟೇಷನ್ ಇನ್-ಚಾರ್ಜ್ ಸೋಮಕರನ್ ಹೇಳಿದ್ದಾರೆ.
ಈ ಸಂಬಂಧ ಮುಖೇಶ್ ಕುಮಾರ್ ಮೇಲೆ ಸೆಕ್ಷನ್ 353 ರ ಅಡಿ ಪ್ರಕರಣ ದಾಖಲಿಸಲಾಗಿದೆ.