ಕೋಟಾ (ರಾಜಸ್ಥಾನ):ಮೊಬೈಲ್ ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಿ ಬಾಲಕನ ಮೇಲೆ 5 ಮಂದಿ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ರಾಜಸ್ಥಾನ ರಾಜ್ಯದ ಬಾಲಕುಂಡ್ನ ದಾದಾಬರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೊಬೈಲ್ ಕಳ್ಳತನ ಆರೋಪ: ಬಾಲಕನಿಗೆ ಬೆಲ್ಟ್ನಿಂದ ಹಿಗ್ಗಾಮುಗ್ಗಾ ಥಳಿತ
ಮೊಬೈಲ್ ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಿ ಬಾಲಕನ ಮೇಲೆ 5 ಮಂದಿ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಬಾಲಕುಂಡ್ನ ದಾದಾಬರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಲ್ಟ್ನಿಂದ ಹಲ್ಲೆ ಮಾಡಿ ದುಷ್ಕರ್ಮಿಗಳು
ಈ ಘಟನೆ ಜೂನ್ 27ರಂದು ನಡೆದಿದ್ದು, ಬಾಲಕನಿಗೆ ಬೆಲ್ಟ್ನಿಂದ ಹೊಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸದ್ಯ ಪೊಲೀಸರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.