ನವದೆಹಲಿ:ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ಅಮೆರಿಕ ರಾಯಭಾರ ಕಚೇರಿ ಅಧಿಕಾರಿ ತಿಳಿಸಿದ್ದಾರೆ.
ಬಿಜೆಪಿ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ರದ್ದು ಪಡಿಸಿದಾಗಿನಿಂದ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಹಳಸಿಹೋಗಿದೆ. ಆದರೆ, ಅಮೆರಿಕ ಮಾತ್ರ ಉಭಯ ದೇಶಗಳ ನಡುವೆ ಶಾಂತಿ ಮತ್ತು ಸಂಯಮಕ್ಕಾಗಿ ಕರೆ ನೀಡುತ್ತಲೇ ಇದೆ ಎಂದು ತಿಳಿಸಿದ್ದಾರೆ.
ಗೃಹ ಬಂಧನದ ವರದಿಗಳು ಮತ್ತು ಸ್ಥಳೀಯ ನಿವಾಸಿಗಳ ಮೇಲಿನ ನಿರಂತರವಾದ ನಿರ್ಬಂಧಗಳ ಬಗ್ಗೆ ನಾವು ತುಂಬಾ ಕಾಳಜಿ ವಹಿಸುತ್ತಿದ್ದೇವೆ ಎಂದಿದ್ದರೆ. ಅಲ್ಲದೆ ಆದಷ್ಟು ಶೀಘ್ರದಲ್ಲಿ ಜಮ್ಮು ಮತ್ತು ಕಾಶ್ಮೀರ ಸಾಮಾನ್ಯ ಸ್ಥಿತಿಗೆ ಮರುಳುತ್ತದೆ ಎಂದಿರುವ ಪ್ರಧಾನಿ ಮೋದಿ ಅವರ ಮಾತಿನ ಮೇಲೆ ನಂಬಿಕೆ ಇರಿಸಿದ್ದೇವೆ ಎಂದಿದ್ದಾರೆ.
ಕಳೆದ ಒಂದು ವಾರದ ಹಿಂದೆಯಷ್ಟೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಕಾಶ್ಮೀರ ಸಮಸ್ಯೆ ಅತ್ಯಂತ ಜಟಿಲವಾಗಿದೆ. ಆ ಸ್ಥಳದಲ್ಲಿ ಹಿಂದೂಗಳು ಹಾಗೂ ಮುಸ್ಲಿಮರು ವಾಸಿಸುತ್ತಿದ್ದು, ಮಾತುಕತೆಯನ್ನು ಅತ್ಯಂತ ಸೂಕ್ಷ್ಮವಾಗಿ ಮಾಡಬೇಕು. ಸಮಸ್ಯೆ ಬಗೆಹರಿಸಲು ಮಧ್ಯಸ್ಥಿಕೆಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದರು.