ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಮತ್ತೊಮ್ಮೆ ಮ್ಯಾಜಿಕ್ ಮಾಡಿದ್ದು, ಎರಡನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜುಗೊಂಡಿದೆ.
50:50 ಸೂತ್ರಕ್ಕೆ ನಾವು ಬದ್ಧ: 30 ಪಕ್ಷೇತರರು ನಮ್ಮ ಸಂಪರ್ಕದಲ್ಲಿ ಎಂದ ಪಢ್ನವಿಸ್!
ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಮತ್ತೊಮ್ಮೆ ಜಯಭೇರಿ ಭಾರಿಸಿದ್ದು, ಎರಡನೇ ಅವಧಿಗೆ ಸರ್ಕಾರ ರಚನೆ ಮಾಡಲು ಸಿದ್ಧವಾಗಿವೆ.
288 ಕ್ಷೇತ್ರಗಳ ಪೈಕಿ ಈಗಾಗಲೇ 160 ಕ್ಷೇತ್ರಗಳಲ್ಲಿ ಗೆಲುವು ದಾಖಲು ಮಾಡಿದ್ದು, ಸರ್ಕಾರ ರಚನೆ ಮಾಡಲು ಮುಂದಾಗಿದೆ. ಈ ವೇಳೆ, ಗೆಲುವಿನ ಖುಷಿಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮಾತನಾಡಿದ್ದು, ಈ ಹಿಂದೆ ಶಿವಸೇನೆ ಜತೆ ಮಾಡಿಕೊಂಡಿರುವ 50:50 ಸೂತ್ರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ. ಜತೆಗೆ ಮುಂದಿನ ಮಹಾರಾಷ್ಟ್ರದ ಮುಖ್ಯಮಂತ್ರಿ ಯಾರು ಆಗಬೇಕು ಎಂಬುದರ ಕುರಿತು ಸಹ ನಾವು ಚರ್ಚೆ ನಡೆಸಲಿದ್ದೇವೆ ಎಂದು ತಿಳಿಸಿದ್ರು.
ಇದೇ ವೇಳೆ ಮಾತನಾಡಿರುವ ಅವರು, ಈಗಾಗಲೇ 15 ಪಕ್ಷೇತರ ಅಭ್ಯರ್ಥಿಗಳು ನಮ್ಮ ಸಂಪರ್ಕದಲ್ಲಿದ್ದು, ಅವರು ನಮ್ಮೊಂದಿಗೆ ಕೈಜೋಡಿಸಲು ಸಿದ್ಧರಾಗಿದ್ದಾರೆ ಎಂದು ಹೇಳಿದ್ರು. ಇದರ ಜತೆಗೆ ಇನ್ನು ಹೆಚ್ಚಿನ ಪಕ್ಷೇತರ ಶಾಸಕರು ನಮ್ಮೊಂದಿಗೆ ಬರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಈ ಸಲ ಚುನಾವಣೆಗೆ ಸ್ಪರ್ಧೆ ಮಾಡಿದ್ದ ನಮ್ಮ ಆರು ಸಚಿವರು ಸೋಲು ಕಂಡಿದ್ದಾರೆ. ಇದರಿಂದ ತುಸು ಹಿನ್ನಡೆಯಾಗಿದೆ ಎಂದು ಸ್ಪಷ್ಟನೆ ಕೊಟ್ಟರು. .