ನವದೆಹಲಿ: ಹೊಸ ಕೃಷಿ ಕಾನೂನುಗಳ ಬಗ್ಗೆ ಪ್ರಧಾನ ಮಂತ್ರಿ ರೈತರಿಗೆ ಪದೇ ಪದೇ ಸುಳ್ಳು ಹೇಳುತ್ತಿದ್ದಾರೆ. ರೈತರ ಹೋರಾಟವನ್ನು ವಿರೋಧ ಪಕ್ಷಗಳು ಲಾಭಕ್ಕಾಗಿ ಬಳಸಿಕೊಳ್ಳುತ್ತಿವೆ ಎಂಬ ಅವರ ಆಧಾರ ರಹಿತ ಆರೋಪದ ವಿರುದ್ಧ ನಾವು ಶಕ್ತವಾದ ಪ್ರತಿಭಟನೆ ಮಾಡುತ್ತೇವೆ ಎಂದು ಪ್ರತಿಪಕ್ಷಗಳು ಜಂಟಿ ಹೇಳಿಕೆ ನೀಡಿವೆ.
ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿರುವ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರಾಹುಲ್ ಗಾಂಧಿ ರೈತರ ಬಗ್ಗೆ ಭಾರಿ ಚಿಂತಿತರಾಗಿದ್ದಾರೆ. ಅವರಿಗೆ ಅವರ ಸರ್ಕಾರ ಅಧಿಕಾರದಲ್ಲಿದ್ದಾಗ ರೈತರಿಗಾಗಿ ಏನಾದರು ಮಾಡಬಹುದಿತ್ತು. ಆದರೆ, ಕಾಂಗ್ರೆಸ್ನದ್ದು ಯಾವಾಗಲು ರೈತ ವಿರೋಧಿ ನಿಲುವಾಗಿದೆ ಎಂದು ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದಿದ್ದಾರೆ. ಇದೇ ವೇಳೆ ರಾಹುಲ್ ರಾಷ್ಟ್ರಪತಿ ಭೇಟಿಯಾಗಿರುವ ಬಗ್ಗೆಯೂ ಟೀಕೆ ಮಾಡಿದ್ದಾರೆ.