ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ವೇಳೆ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದ ಮಮತಾ, ರಾಜ್ಯದ ಹೆಸರನ್ನು 'ಬಾಂಗ್ಲಾ' ಎಂದು ಬದಲಿಸಲು ಪ್ರಧಾನಿಗೆ ಮನವಿ ಸಲ್ಲಿಸಿದರು. ಜೊತೆಗೆ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ವಿವಿಧ ಅನುದಾನಗಳ ತ್ವರಿತ ಬಿಡುಗಡೆಗೆ ಮನವಿ ಮಾಡಿದ್ರು.
ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಮಮತಾ, ಮೋದಿಯವರೊಂದಿಗೆ ನಡೆಸಿದ ಸಭೆ ಉತ್ತಮವಾಗಿತ್ತು. ರಾಜ್ಯದ ಹೆಸರು ಬದಲಿಸಲು ಇತ್ತ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಬಗ್ಗೆ ಏನಾದರೂ ಮಾಡುತ್ತೇನೆ ಎಂಬ ಭರವಸೆ ನೀಡಿದ್ದಾರೆ ಎಂದರು.