ಕರ್ನಾಟಕ

karnataka

ETV Bharat / bharat

ಟಿಎಂಸಿಗೆ ಕೈ ಕೊಟ್ಟ ರಾಜೀವ್ ಬ್ಯಾನರ್ಜಿ.. ಸಚಿವ ಸ್ಥಾನಕ್ಕೆ ರಾಜೀನಾಮೆ..! - ರಾಜ್ಯದ ಜನತೆಗೆ ಸೇವೆ ಸಲ್ಲಿಸಲು ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ

ಪಶ್ಚಿಮ ಬಂಗಾಳದಲ್ಲಿ ಅರಣ್ಯ ಸಚಿವ ರಾಜೀವ್ ಬ್ಯಾನರ್ಜಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರದಲ್ಲಿ ರಾಜ್ಯದ ಜನತೆಗೆ ಸೇವೆ ಸಲ್ಲಿಸಲು ಅವಕಾಶ ಕೊಟ್ಟಿದ್ದಕ್ಕಾಗಿ ನಾನು ನಿಮಗೆ ಹೃತ್ಪೂರ್ವಕ ಧನ್ಯವಾದ ಸಲ್ಲಿಸುತ್ತೇನೆ ಎಂದು ಬರೆದಿದ್ದಾರೆ.

resigns
ರಾಜೀನಾಮೆ

By

Published : Jan 22, 2021, 1:35 PM IST

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಹೊಸ್ತಿಲಲ್ಲಿ ಟಿಎಂಸಿಗೆ ಮರ್ಮಾಘಾತವಾಗಿದೆ. ಮಮತಾ ಬ್ಯಾನರ್ಜಿ ಸರ್ಕಾರದ ಸಚಿವರು ಒಬ್ಬೊಬ್ಬರಾಗಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಪಕ್ಷ ತೊರೆಯುತ್ತಿದ್ದಾರೆ.

ಅರಣ್ಯ ಸಚಿವ ರಾಜೀವ್ ಬ್ಯಾನರ್ಜಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರದಲ್ಲಿ ರಾಜ್ಯದ ಜನತೆಗೆ ಸೇವೆ ಸಲ್ಲಿಸಲು ಅವಕಾಶ ಕೊಟ್ಟಿದ್ದಕ್ಕಾಗಿ ನಾನು ನಿಮಗೆ ಹೃತ್ಪೂರ್ವಕ ಧನ್ಯವಾದ ಸಲ್ಲಿಸುತ್ತೇನೆ ಎಂದು ಬರೆದಿದ್ದಾರೆ.

ಸಚಿವ ಸ್ಥಾನಕ್ಕೆ ರಾಜೀವ್ ಬ್ಯಾನರ್ಜಿ ರಾಜೀನಾಮೆ

ಇತ್ತೀಚೆಗಷ್ಟೇ ಸುವೆಂದು ಅಧಿಕಾರಿ ಹಾಗೂ ಅವರ ಸಹೋದರ ಪಕ್ಷ ತೊರೆದು ಬಿಜೆಪಿ ಸೇರಿದ್ದರು. ಇದೀಗ ರಾಜೀವ್ ಅವರ ರಾಜೀನಾಮೆಯೂ ಪಕ್ಷಕ್ಕೆ ಭಾರಿ ಹಿನ್ನಡೆಯನ್ನುಂಟು ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ಶತಾಯಗತಾಯ ಕೇಸರಿ ಸರ್ಕಾರ ರಚಿಸಬೇಕೆಂದು ಪಣ ತೊಟ್ಟಿರುವ ಬಿಜೆಪಿಗೆ ಟಿಎಂಸಿ ಈ ಬೆಳವಣಿಗೆ ಸಹಕಾರಿಯಾಗಲಿದೆ.

ABOUT THE AUTHOR

...view details