ಕೋಲ್ಕತ್ತಾ:ಪೊಲೀಸ್ ಜೀಪ್-ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಹಿರಿಯ ಪೊಲೀಸ್ ಅಧಿಕಾರಿ ಸೇರಿ ಮೂವರು ದುರ್ಮರಣಕ್ಕೀಡಾಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
ಪೊಲೀಸ್ ಜೀಪ್-ಟ್ರಕ್ ನಡುವೆ ಅಪಘಾತ: ಕಮಾಂಡಿಂಗ್ ಆಫೀಸರ್ ಸೇರಿ ಮೂವರ ಸಾವು - ಕಮಾಂಡಿಂಗ್ ಆಫೀಸರ್
ಕೋಲ್ಕತ್ತಾಗೆ ವಾಪಸ್ ಆಗುತ್ತಿದ್ದ ವೇಳೆ ಪೊಲೀಸ್ ಜೀಪ್ ಟ್ರಕ್ಗೆ ಡಿಕ್ಕಿ ಹೊಡೆದಿರುವ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
Accident
ಪಶ್ಚಿಮ ಬಂಗಾಳದ ಹೊಗ್ಲಿಯಲ್ಲಿ ಈ ಘಟನೆ ನಡೆದಿದ್ದು, ರಾಜ್ಯ ಸಶಸ್ತ್ರ ಪೊಲೀಸ್ 12ನೇ ಬೆಟಾಲಿಯನ್ನ ಕಮಾಂಡಿಂಗ್ ಆಫೀಸರ್ ಚಟರ್ಜಿ, ಅಂಗರಕ್ಷಕ ಹಾಗೂ ಜೀಪ್ ಡ್ರೈವರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇಂದು ಬೆಳಗ್ಗೆ ದಾದಪುರದಿಂದ ಕೋಲ್ಕತ್ತಾಗೆ ವಾಪಸ್ ಬರುತ್ತಿದ್ದ ವೇಳೆ ಟ್ರಕ್ಗೆ ಜೀಪ್ ಡಿಕ್ಕಿ ಹೊಡೆದಿದೆ. ತಕ್ಷಣವೇ ಮೂವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.