ಹೈದರಾಬಾದ್: ರಾಮಜನ್ಮಭೂಮಿ-ಬಾಬ್ರಿ ಮಸೀದಿಯ ವಿವಾದಿತ 2.77 ಎಕರೆ ಜಾಗದ ಬಗೆಗಿನ ತೀರ್ಪು ಇಂದು ಹೊರಬಿದ್ದಿದ್ದು, ಏಳು ದಶಕಗಳ ಸಂಘರ್ಷಕ್ಕೆ ಅಧಿಕೃತ ತೆರೆ ಬಿದ್ದಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 2010ರಲ್ಲಿ ಅಲಹಾಬಾದ್ ಹೈಕೋರ್ಟ್ ಕೂಡಾ ಮಹತ್ವದ ತೀರ್ಪು ನೀಡಿತ್ತು.
2002ರಲ್ಲಿ ಈ ವಿವಾದಿತ ಜಾಗದ ಒಡೆತನ ಯಾರಿಗೆ ಸೇರಿದ್ದು ಎನ್ನುವ ವ್ಯಾಜ್ಯದ ಕುರಿತು ಅಲಹಾಬಾದ್ ಹೈಕೋರ್ಟ್ ವಿಚಾರಣೆ ಆರಂಭಿಸಿದೆ. ಪಾಲುದಾರ ಅರ್ಜಿದಾರರಾದ ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾರ ಮತ್ತು ರಾಮ ಲಲ್ಲಾ ಎಂಬ ಮೂವರು ವಾರಸುದಾರರಿಗೆ ವಿವಾದಿತ ಜಾಗದ ಸಮಾನವಾಗಿ ಹಂಚಿಕೆ ಮಾಡಿ ಕೋರ್ಟ್ ತೀರ್ಪಿತ್ತಿದೆ. ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾರಾ ಮತ್ತು ರಾಮ್ ಲಲ್ಲಾಗೆ ಸಮಾನವಾಗಿ ಈ ಭೂಮಿಯನ್ನು ಹಂಚಿಕೆ ಮಾಡುವಂತೆ ನ್ಯಾಯಮೂರ್ತಿಗಳ ಪೀಠ 2:1 ಬಹುಮತದ ಒಪ್ಪಿಗೆ ನೀಡಿತ್ತು.