ಚೆನ್ನೈ:ತಮಿಳುನಾಡಿನಲ್ಲಿ ನಡೆಯಲಿರುವ 2021ರ ವಿಧಾನಸಭಾ ಚುನಾವಣೆಯಲ್ಲಿ ತಾನು ಸ್ಪರ್ಧಿಸಲಿದ್ದೇನೆ ಮತ್ತು ಸಹ ನಟ ರಜನಿಕಾಂತ್ ಅವರ ಬೆಂಬಲವನ್ನೂ ಕೋರುತ್ತೇನೆ ಎಂದು ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಗುರುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂದಿನ ವರ್ಷ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವಾದ ಮಕ್ಕಲ್ ನೀಧಿ ಮಾಯಂ (ಎಂಎನ್ಎಂ) ನಿಂದ ಸ್ಪರ್ಧಿಸುವುದಾಗಿ ಹೇಳಿದ್ದಾರೆ.
ಕಮಲ್ ಹಾಸನ್ ಅವರು ರಜನಿಕಾಂತ್ ಅವರೊಂದಿಗೆ ರಾಜಕೀಯದ ಬಗ್ಗೆ ಚರ್ಚಿಸುತ್ತಿದ್ದು, ಮುಂಬರುವ ಚುನಾವಣೆಯಲ್ಲಿ ರಜನಿಕಾಂತ್ ಅವರ ಬೆಂಬಲವನ್ನೂ ಕೇಳುತ್ತೇನೆ ಎಂದು ಎಂಎನ್ಎಂ ಸಂಸ್ಥಾಪಕ ತಿಳಿಸಿದ್ದಾರೆ.
ತಮ್ಮ ರಾಜಕೀಯ ನಿಲುವುಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕಾದದ್ದು ರಜನಿಕಾಂತ್ ಹಾಗೆ ಅವರ ಆರೋಗ್ಯ ಹೆಚ್ಚು ಮುಖ್ಯ ಎಂದು ಕಮಲ್ ಹಾಸನ್ ಹೇಳಿದ್ದಾರೆ.
ಹಾಗೇ ಈಗಾಗಲೇ ವಿಧಾನಸಭಾ ಚುನಾವಣೆಗೆ ನಿರೀಕ್ಷಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.