ನವದೆಹಲಿ: ದೇಶದ ಎಲ್ಲಾ ನಾಗರಿಕರನ್ನು ಎನ್‌ಆರ್‌ಸಿ(ರಾಷ್ಟ್ರೀಯ ನಾಗರಿಕರ ನೋಂದಣಿ) ಪಟ್ಟಿಗೆ ಸೇರಿಸುವ ವಿಚಾರವನ್ನು ಗೃಹಸಚಿವ ಅಮಿತ್ ಶಾ ಸಂಸತ್ತಿನ ಮೇಲ್ಮನೆಯಲ್ಲಿ ಪ್ರಸ್ತಾಪಿಸಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ಈ ಹಿಂದೆ ಎನ್‌ಆರ್‌ಸಿ ಸೇರ್ಪಡೆ ಅಸ್ಸೋಂ ರಾಜ್ಯಕ್ಕಷ್ಟೇ ಸೀಮಿತವಾಗಿತ್ತು. ಅದನ್ನ ದೇಶಾದ್ಯಂತ ವಿಸ್ತರಿಸುವ ವಿಚಾರವನ್ನು ಪ್ರಸ್ತಾಪಿಸಿದರು.
ಇದರ ಪ್ರಕಾರ, ಯಾವುದೇ ಜಾತಿ, ಧರ್ಮದ ಹೊರತಾಗಿ ಭಾರತದ ಎಲ್ಲಾ ನಾಗರಿಕರು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಪಟ್ಟಿಯಲ್ಲಿ ಸ್ಥಾನ ಪಡೆಯುತ್ತಾರೆ. ಈ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ. ಇದು ಕೇವಲ ಒಂದು ಪ್ರಕ್ರಿಯೆ ಅಷ್ಟೇ ಎಂದು ಶಾ ಹೇಳಿದರು. ಅಲ್ಲದೇ ಇದು ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಸೇರಿದಂತೆ ಕೆಲ ಮುಸ್ಲಿಂ ರಾಷ್ಟ್ರಗಳಿಗೆ ಭಾರತದ ನಾಗರಿಕತ್ವ ನೀಡುವ ಪೌರತ್ವ ತಿದ್ದುಪಡಿ ಮಸೂದೆಗಿಂತ ಭಿನ್ನವಾಗಿದೆ ಎಂದು ಅವರು ತಿಳಿಸಿದರು.