ನವದೆಹಲಿ :ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 36,011 ಕೋವಿಡ್ ಸೋಂಕಿತರು ಪತ್ತೆಯಾಗಿದ್ದು, 482 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 96,44,222 ಹಾಗೂ ಮೃತರ ಸಂಖ್ಯೆ 1,40,182ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 91,00,792 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 4,03,248 ಕೇಸ್ ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.