ನವದೆಹಲಿ: ಕಳೆದ 24 ಗಂಟೆಗಳಲ್ಲಿ 38,772 ಸೋಂಕಿತರು ಪತ್ತೆಯಾಗಿದ್ದು, 443 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 94,31,692ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಪೈಕಿ ಶೇ.93.71 ರಷ್ಟು ಗುಣಮುಖ: 443 ಮಂದಿ ಬಲಿ
ಭಾರತದಲ್ಲಿ ಒಟ್ಟು ಸೋಂಕಿತರ ಪೈಕಿ ಶೇ.93.71 ರಷ್ಟು ಅಂದರೆ 88,47,600 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 38,772 ಸೋಂಕಿತರು ಪತ್ತೆಯಾಗಿದ್ದಾರೆ.
ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ
ಒಟ್ಟು ಸೋಂಕಿತರ ಪೈಕಿ ಶೇ.93.71 ರಷ್ಟು ಅಂದರೆ 88,47,600 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ ಶೇ.4.83 ರಷ್ಟು ಅಂದರೆ 4,46,952 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ನವೆಂಬರ್ 29 ರ 14,03,79,976 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 8,76,173 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.
Last Updated : Nov 30, 2020, 9:55 AM IST